ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಸ್ಐಒದಿಂದ ಆರ್ಟಿಇ ಜಾಗೃತಿ

Rashmi Kasaragodu
Updated On : 14 Jan 2014, 11:54 am

ಸಿಂಧನೂರು: ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ನಿಂದ ಕಳೆದ 30 ವರ್ಷಗಳಲ್ಲಿ ಹಲವಾರು ಚರ್ಚೆಗಳನ್ನು ಮತ್ತು ಅಧ್ಯಯನಗಳನ್ನು ನಡೆಸಲಾಗಿದೆ. ರಾಜ್ಯಾದ್ಯಂತ ಶಿಕ್ಷಣ ಹಕ್ಕು ಕಾಯ್ದೆ ಜಾರಿಯಾಗಿ 4 ವರ್ಷಗಳು ಕಳೆದರೂ ಸಮಸ್ಯೆಗಳು ಮತ್ತು ಗೊಂದಲಗಳು ಉಳಿದುಕೊಂಡಿರುವುದು ವಿಷಾದನೀಯ. ಈ ನಿಟ್ಟಿನಲ್ಲಿ ಪಾಲಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಯಾಂಪಸ್ ಕಾರ್ಯದರ್ಶಿ ಸೈಯ್ಯದ್ ತನ್ವೀರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಸ್ಐಒ ಅಭಿಯಾನ ಪ್ರಯುಕ್ತ ರಾಜ್ಯಾದ್ಯಂತ ಬೀದಿ ನಾಟಕ, ಭಿತ್ತಿಪತ್ರ ಅಂಟಿಸುವುದು, ಕರಪತ್ರ ವಿತರಣೆ, ವಿದ್ಯಾರ್ಥಿಗಳ ದಾಖಲಾತಿ ಮತ್ತಿತರ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ಸರ್ಕಾರಕ್ಕೆ ರಾಜ್ಯಾದ್ಯಂತ ಸಮರ್ಪಕವಾಗಿ ಜಾರಿಗೊಳಿಸಲು ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಕಲ್ಮಲಾ; ಪರವಾನಗಿ ರದ್ದತಿಗೆ ಆಗ್ರಹ
ರಾಯಚೂರು: ತಾಲೂಕಿನ ಕಲ್ಮಲಾ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ 37ರ ಪರವಾನಗಿ ರದ್ದುಗೊಳಿಸುವಂತೆ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವಯುವಕರ ಸಂಘ ಒತ್ತಾಯಿಸಿದೆ. ಈ ಕುರಿತು ಈಚೆಗೆ ಗ್ರಾಮದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಂಘದಿಂದ ಮನವಿ ಸಲ್ಲಿಸಿ, ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿ 37ರ ನಿರ್ವಹಣೆದಾರರು ಸಮರ್ಪಕವಾಗಿ ಪಡಿತರ ಹಂಚಿಕೆ ಮಾಡುತ್ತಿಲ್ಲ. ಅಳತೆ ಮತ್ತು ತೂಕದಲ್ಲಿಯೂ ಪಡಿತರದಾರರಿಗೆ ವಂಚಿಸುತ್ತಿದ್ದಾರೆಂದು ಆರೋಪಿಸಿದ್ದಾರೆ. ಕಾರಣ ಕೂಡಲೇ ನ್ಯಾಯಬೆಲೆ ಅಂಗಡಿಯ ಪರವಾನಗಿ ರದ್ದುಗೊಳಿಸಬೇಕು. ಬಡ ಪಡಿತರದಾರರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಸಂಘ ಒತ್ತಾಯಿಸಿದೆ.
16ರಿಂದ ಜಾತ್ರೆ
ರಾಯಚೂರು: ಸಿಂಧನೂರು ತಾಲೂಕಿನ ಸೋಮಲಾಪುರದ ಅಂಬಾಮಠದಲ್ಲಿ ಅಂಬಾದೇವಿ ಜಾತ್ರೆ ಜ.16ರಿಂದ ನಡೆಯಲಿದೆ. ಅಂದು ಸಂಜೆ ರಥೋತ್ಸವ, ಜ.18ರಂದು ಸಂಜೆ ಹೂವಿನ ರಥೋತ್ಸವ ಹಾಗೂ ಜ.19ರಂದು ಮಧ್ಯಾಹ್ನ 1ಕ್ಕೆ ಕುಂಭೋತ್ಸವ ಜರುಗಲಿದೆ. ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಲಿಂಗಸ್ಗೂರು ಸಹಾಯಕ ಆಯುಕ್ತ ಟಿ. ಯೋಗೇಶ್ ಮನವಿ ಮಾಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement