ಕನಕ ಸಮುದಾಯ ಭವನಕ್ಕೆ ಶಿಲಾನ್ಯಾಸ
ಕ.ಪ್ರ. ವಾರ್ತೆ ಲಿಂಗಸ್ಗೂರು ಜ.13
ಲಿಂಗಸ್ಗೂರು ಪಟ್ಟಣದಲ್ಲಿ ನೂತನ ಕನಕ ಸಮುದಾಯ ಭವನ ಕಟ್ಟಡ ಕಾಮಗಾರಿಗೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮಕ್ಕಳ ಶಿಕ್ಷಣವಂತರಾಗಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹೈ-ಕ ಭಾಗದ ಅಭಿವೃದ್ಧಿಗೆ ವಿಶೇಷ ಸ್ಥಾನಮಾನದಡಿ ಯೋಜನೆ ರೂಪಿಸಲು ಸರ್ಕಾರ ಬದ್ಧವಾಗಿದ್ದು, ಅಗತ್ಯ ವಸತಿ ನಿಲಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯ ಸಮೀಪದ ವಸತಿ ನಿಲಯಗಳಿಗೆ ಅರ್ಜಿ ಹಾಕಿದ ಎಲ್ಲ ಮಕ್ಕಳಿಗೆ ಸ್ಥಾನ ನೀಡಬೇಕು ಹಾಗೂ ವಿವಿಧ ಯೋಜನೆಯಡಿ ಬಿಡುಗಡೆಯಾದ ಅನುದಾನ ಸದ್ಬಳಕೆ ಮಾಡಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಶಾಸಕ ಮಾನಪ್ಪ ವಜ್ಜಲ್, ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ಜಿಪಂ ಸದಸ್ಯ ಎಚ್.ಬಿ. ಮುರಾರಿ, ಸಹಾಯಕ ಆಯುಕ್ತ ಟಿ. ಯೋಗೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಲ್.ಬಿ. ಸಜ್ಜನ್, ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದಾರ, ಡಿವೈಎಸ್ಪಿ ಅನಿತಾ ಹದ್ದಣ್ಣವರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ತಾಪಂ ಸದಸ್ಯರಾದ ಪರಸಪ್ಪ ಹುನಕುಂಟಿ, ಶರಣಗೌಡ, ಮುಖಂಡರಾದ ಗುಂಡಪ್ಪ ನಾಯಕ, ಹನುಮಂತಪ್ಪ ತೊಗರಿ, ಹನುಮಂತಪ್ಪ ಕಂದಗಲ್, ಮುದುಕಪ್ಪ ವಕೀಲರು, ಮಲ್ಲಣ್ಣ ವಾರದ, ಬೀರಪ್ಪ ಪೂಜಾರಿ, ಚನ್ನಾರಡ್ಡಿ ಬಿರಾದಾರ, ಶಿವಾನಂದ ನರಹಟ್ಟಿ, ನಾಗರಾಜ ತಿಪ್ಪಣ್ಣ ಇದ್ದರು.