ವಿವೇಕಾನಂದರ ಜಯಂತಿ ಆಚರಣೆ
ರಾಯಚೂರು: ನಗರದ ವಿವೇಕಾನಂದ ಡಿ.ಇಡಿ ಕಾಲೇಜಿನಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದರ 151ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಗುರುಮಠಕಲ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಸನ್ನಕುಮಾರ್ ಮಾತನಾಡಿ, ವಿವೇಕಾನಂದರ ಬಾಲ್ಯ ಮತ್ತು ಬದುಕಿನ ಬಗ್ಗೆ ವಿವರಿಸಿ ಯುವಕರು ವಿವೇಕಾನಂದರ ಆದರ್ಶ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಮನವಿ ಮಾಡಿದರು. ಎಂಎಸ್ಡಬ್ಲ್ಯು ಕಾಲೇಜಿನ ಪ್ರಾಚಾರ್ಯ ಮಹೇಶ್, ಡಿ.ಇಡಿ ಕಾಲೇಜಿನ ಉಪನ್ಯಾಸಕ ಗೋವಿಂದರಾಜ್ ಮಾತನಾಡಿ, ವಿವೇಕಾನಂದರು ಮತ್ತು ರಾಮಕೃಷ್ಣ ಪರಮಹಂಸರ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಅತಿಥಿಯಾಗಿ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ವಿಜಯಲಕ್ಷ್ಮಿ, ಅಧ್ಯಕ್ಷತೆ ವಹಿಸಿ ಪ್ರಾಚಾರ್ಯ ಶಾಮಣ್ಣ ಮದ್ದೂರು ಮಾತನಾಡಿದರು. ಪ್ರಮುಖರಾದ ದತ್ತು ಪಾಸೋಡಿ, ಹನುಮಂತರಾವ್ ಪಾಸೋಡಿ, ಮಲ್ಲಿಕಾರ್ಜುನ ಹೊಸೂರು, ಸುಂಮಗಳ, ಈರಮ್ಮ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ವರ್ಗದವರು ಕಾರ್ಯಕ್ರಮದಲ್ಲಿದ್ದರು.