ಇಂದು ಬೀದರ್ ಬಂದ್‌ಗೆ ಕರೆ
ಬೀದರ್: ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷದ ಕಾರಣ, ದಕ್ಷ ಪೊಲೀಸ್ ಅಧಿಕಾರಿ ಪಿಎಸ್‌ಐ ಮಲ್ಲಿಕಾರ್ಜುನ್ ಬಂಡೆ ನಿಧನ ಹೊಂದಿದ್ದಾರೆಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜ. 16ರಂದು ಜಿಲ್ಲಾ ಬಂದ್‌ಗೆ ಕರೆ ನೀಡಿದ್ದು, ಕರಾಳ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಗಂದಗೆ, ಗುಲ್ಬರ್ಗ ನಗರದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಒಬ್ಬ ಕುಖ್ಯಾತ ರೌಡಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ದಕ್ಷ ಪೂಲೀಸ್ ಅಧಿಕಾರಿಯಾಗಿದ್ದ ಪಿಎಸ್‌ಐ ಮಲ್ಲಿಕಾರ್ಜುನ್ ಬಂಡೆ ಗುಂಡಿನ ಕಾಳಗದಲ್ಲಿ ಗಾಯಗೊಂಡು ಜೀವನ್ಮರಣದ ಹೋರಾಟ ನಡೆಸಿದ್ದ ಸಂದರ್ಭ ಹೆಚ್ಚಿನ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ಮಹಾ ಅಪರಾಧ ಎಂದಿದ್ದಾರೆ. ರಾಜ್ಯ ಸರ್ಕಾರದ ಈ ನಿಷ್ಕಾಳಜಿ ಖಂಡಿಸಿ ಜಿಲ್ಲಾ ಬಿಜೆಪಿ ಇದೇ ಜ. 16ರಂದು ಜಿಲ್ಲಾದ್ಯಂತ ಕರಾಳ ದಿನಾಚರಣೆಯನ್ನು ಆಚರಿಸುತ್ತದೆ ಹಾಗೂ ಜಿಲ್ಲಾ ಬಂದ್‌ಗೆ ಕರೆ ನೀಡಿರುತ್ತದೆ ಎಂದು ತಿಳಿಸಿದ್ದಾರೆ. ಜಿಲ್ಲಾದ್ಯಂತ ಎಲ್ಲಾ ಸಾರ್ವಜನಿಕರು, ವ್ಯಾಪಾರಿಗಳು, ಆಟೋ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕ ಮತ್ತಿತರರು ಸ್ವಯಂ ಪ್ರೇರಿತ ಬಂದ್ ಮಾಡುವುದರೊಂದಿಗೆ ದಕ್ಷ ಅಧಿಕಾರಿ ಮಲ್ಲಿಕಾರ್ಜುನ್ ಬಂಡೆ ಅವರಿಗೆ ಗೌರವ ಸಲ್ಲಿಸಬೇಕೆಂದು ಜಿಲ್ಲಾಧ್ಯಕ್ಷರಾದ ಶಿವರಾಜ ಗಂದಗೆ ಮನವಿ ಮಾಡಿದ್ದಾರೆ.