ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ತಿಳಿವಳಿಕೆ ಕಾರ್ಯಕ್ರಮ

Rashmi Kasaragodu
Updated On : 16 Jan 2014, 11:28 am

ರಾಯಚೂರು: ನಗರದ ನೀಲಕಂಠೇಶ್ವರ ಬಡಾವಣೆಯಲ್ಲಿ ಈಚೆಗೆ ಏಷಿಯನ್ ಅಭಿವೃದ್ಧಿ ಬ್ಯಾಂಕಿನ ನೆರವಿನ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕೆ ಕಾರ್ಯಕ್ರಮದ ಸಮುದಾಯ ಅಭಿವೃದ್ಧಿ ವಿಭಾಗದಿಂದ ತಿಳಿವಳಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ನೀಲಕಂಠೇಶ್ವರ ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ಮಲ್ಲಣಗೌಡ ವಹಿಸಿದ್ದರು.
ಯೋಜನೆಯ ಯೋಜನಾಧಿಕಾರಿ ದಯಾನಂದ ಕುಮಾರ ಮಾತನಾಡಿ, ಎಡಿಬಿ ನೆರವಿನ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿಯ ಬಳಕೆಯ ಮಹತ್ವದ ಬಗ್ಗೆ ನಿವಾಸಿಗಳಿಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿ ಸಂಗಯ್ಯ ಸೊಪ್ಪಿ ಮಠ ಮಾತನಾಡಿ, ನಗರದ ಸ್ವಚ್ಛತೆಯೆಡೆಗೆ ನಾಗರಿಕರೂ ಹೆಚ್ಚಿನ ಗಮನಹರಿಸಬೇಕೆಂದು ಸಲಹೆ ನೀಡಿದರು.
ವಕೀಲ ಜಿ.ಎಲ್. ರಂಗಪ್ಪ ಮಾತನಾಡಿ, ಪ್ರತಿ ಮನೆಯಲ್ಲಿ ವೈಯಕ್ತಿಕ ಶೌಚಾಲಯ ಹೊಂದುವುದು ಅವಶ್ಯಕ.  ನಗರದಲ್ಲಿ 24/7 ಕುಡಿಯುವ ನೀರಿನ ಯೋಜನೆಯು ಜಾರಿಗೆ ಬರುತ್ತಿದ್ದು, ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳು ವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸುವಂತೆ ಮನವಿ ಮಾಡಿದರು.
ನಿವೃತ್ತ ಶಿಕ್ಷಕ ಎಚ್. ತಿಮ್ಮಪ್ಪ, ಮಹಿಳಾ ಸಂಘದ ಅಧ್ಯಕ್ಷೆ ಎಚ್. ಪದ್ಮಾ, ಮಂಜುನಾಥ್, ಟಿ. ಸಂಧ್ಯಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement