ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿವಾದ: ಇಂದು ಪ್ರತಿಭಟನೆ

Rashmi Kasaragodu
Updated On : 16 Jan 2014, 11:28 am

ರಾಯಚೂರು: ನಗರದಲ್ಲಿ ಜಿಲ್ಲಾಡಳಿತ ಭವನವನ್ನು ಈಗಿನ ಐತಿಹಾಸಕ ಸಾತ್ ಕಚೇರಿ ಸ್ಥಳದಲ್ಲಿಯೇ ನಿರ್ಮಿಸಬೇಕು ಹಾಗೂ ಜಿಲ್ಲಾ ಆಸ್ಪತ್ರೆ ಆವರಣವನ್ನು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ಕೆ ಮಾತ್ರ ಬಳಸುವಂತೆ ಒತ್ತಾಯಿಸಿ ಜಿಲ್ಲಾ ಆಸ್ಪತ್ರೆ ಆವರಣ ಹಾಗೂ ಸಾತ್ ಕಚೇರಿ ಉಳಿಸಿ ಹೋರಾಟ ಸಮಿತಿಯಿಂದ ಜ.16 ರಂದು ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಮುಖ ಡಾ. ರಜಾಕ್ ಉಸ್ತಾದ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ. ಕಾರಣ ನಗರದ ಜನತೆ ಹಾಗೂ ಸಮಾನ ಮನಸ್ಕರು ಹೋರಾಟದಲ್ಲಿ ಪಾಲ್ಗೊಂಡು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement