ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಹೊಲಿಗೆ ತರಬೇತಿ ಸಮಾರೋಪ

Rashmi Kasaragodu
Updated On : 16 Jan 2014, 11:28 am

ರಾಯಚೂರು: ನಗರದ ನೆಹರು ಯುವಕೇಂದ್ರ, ಭಾರತ ಸೇವಾ ದಳ, ವಿಜಿಸಿ ಟ್ರಸ್ಟ್, ಹೆಲ್ಪ್ ಸೇವಾ ಸಂಸ್ಥೆ, ಸುಮಯ್ಯ ಮಹಿಳಾ ಮಂಡಳಿ ಸೇರಿ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಈಚೆಗೆ ಹೊಲಿಗೆ ಮತ್ತು ಮೆಹೆಂದಿ ತರಬೇತಿ ಕಾರ್ಯಕ್ರಮದ ಸಮಾರೋಪ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಮಹಮ್ಮದ್ ರಿಯಾಜ್ ಮಾತನಾಡಿ, ತರಬೇತಿಯ ಲಾಭ ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಶಿಬಿರಾರ್ಥಿಗಳಿಗೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನೆಹರು ಯುವಕೇಂದ್ರದ ಲೆಕ್ಕಾಧಿಕಾರಿ ಜಿ.ಎಸ್. ಹಿರೇಮಠ್ ಮಾತನಾಡಿ, ಯುವಜನತೆ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯುವತ್ತ ಹಾಗೂ ಕೌಶಲ್ಯಾಭಿವೃದ್ಧಿಗೆ ಹೆಚ್ಚು ಆಸಕ್ತಿ ತೋರಬೇಕೆಂದು ಸಲಹೆ ನೀಡಿದರು.
ಭಾರತ ಸೇವಾದಳದ ಜಿಲ್ಲಾ ಸಂಘಟಕ ವಿದ್ಯಾಸಾಗರ ಚಿಣಮಗೇರಿ ಮಾತನಾಡಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಈ ವೇಳೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅತಾವುಲ್ಲಾ ವಕೀಲರು, ಸುಮಯ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ಹೀನಾ ಕೌಸರ್, ಯಾಸ್ಮೀನ್ ಬೇಗಂ ಇದ್ದರು.


ಬಡ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಣೆ
ರಾಯಚೂರು: ನಗರದ ಬೇಸ್ತವಾರಪೇಟೆಯಲ್ಲಿ ಈಚೆಗೆ ದಿ. ಆದೋನಿ ಬಾಲಮ್ಮ ಅವರ ಐದನೇ ಪುಣ್ಯಸ್ಮರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಚಾಲನೆ ನೀಡಿ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು. ನಗರದ ಖ್ಯಾತ ಉದ್ಯಮಿ ಈ. ಆಂಜನೇಯ್ಯ, ಶ್ರೀಕಾಂತ, ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement