ಆರ್ಟಿಇ ಜಾಗೃತಿ ಜಾಥಾಕ್ಕೆ ಚಾಲನೆ
ಲಿಂಗಸ್ಗೂರು: ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ (ಎಸ್ಐಒ) ದಿಂದ ಹಮ್ಮಿಕೊಂಡಿದ್ದ ಆರ್ಟಿಇ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಗೌಡ ಪಾಟೀಲ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ ವತಿಯಿಂದ ಖಾಸಗಿ ಶಾಲೆಗಳಲ್ಲಿ ಮೀಸಲಿರುವ ಶೇ.25 ರಷ್ಟು ಪ್ರವೇಶ ಪಡೆಯಲು ಪಾಲಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿರುವುದು ಶ್ಲಾಘನೀಯ. ಸಂಘ- ಸಂಸ್ಥೆಗಳು ಹಾಗೂ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕಾರ ನೀಡಿದರೆ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿಡಿಪಿಒ ಪ್ರಭಾಕರ, ಎಸ್ಐಒ ಸಂಘಟನೆ ಅಧ್ಯಕ್ಷ ಅಜೀಜ್ ಜಹಗೀರದಾರ, ಸೋಹೆಲ್, ಅಜೀಜ್, ಮುಸ್ತಫಾ, ಯಾಕೂಬ್, ಜಿಲಾನಿ ಇದ್ದರು.