ಡಿಕ್ಕಿ; ಪಾದಚಾರಿ ಸಾವು
ರಾಯಚೂರು: ಸಿಂಧನೂರು ತಾವೂಕಿನ ಅಲಬನೂರು ಕ್ರಾಸ್ ಬಳಿ ಲಾರಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಮೃತ ಹುಚ್ಚಪ್ಪ ಎಂದು ಗುರುತಿಸಲಾಗಿದೆ. ಈತ ರಸ್ತೆ ಬದಿ ಸಾಗುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಆಗಮಿಸಿದ ಲಾರಿಯು ನಿಯಂತ್ರಣ ತಪ್ಪಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಹಿಳೆಗೆ ಗಾಯ
ರಾಯಚೂರು: ತಾಲೂಕಿನ ಗಾಣದಾಳ ಗ್ರಾಮದಲ್ಲಿ ಪತಿಯೊಬ್ಬ ಪತ್ನಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುವನ್ನು ಧನಲಕ್ಷ್ಮಿ(30) ಎಂದು ಗುರುತಿಸಲಾಗಿದೆ. ಈಕೆಯ ಪತಿ ಲಕ್ಷ್ಮಣ ಎಂಬಾತ ಈಕೆಯ ಬಾಯಿಗೆ ಬಟ್ಟೆಯಿರಿಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ. ಕೂಡಲೇ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಆರೋಪಿ ಲಕ್ಷ್ಮಣನನ್ನು ಇಡಪನೂರು ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.