ಮತದಾರರ ದಿನ: ಇಂದು ಸಭೆ
ರಾಯಚೂರು: ನಗರದಲ್ಲಿ ಜ.25ರಂದು ಆಯೋಜಿಸಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಜ.17ರಂದು ಪೂರ್ವಭಾವಿ ಸಭೆಯನ್ನು ನಗರದಲ್ಲಿ ಕರೆಯಲಾಗಿದೆ.
ಅಂದು ಮತದಾರರಲ್ಲಿ ಜಾಗೃತಿ ಮೂಡಿಸುವ ಕುರಿತು ಭಾಷಣ, ಹಾಡುಗಳು ಮತ್ತು ಯುವ ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಗಳನ್ನು ಏರ್ಪಡಿಸಿ ಬಹುಮಾನ ನೀಡಲು ಹಾಗೂ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಒಪ್ಪಿಸುವ ವಿಷಯ ಕುರಿತಾಗಿ ಚರ್ಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜ.17ರಂದು ಸಂಜೆ 4ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.