ಗಣರಾಜ್ಯೋತ್ಸವ: ವಿವಿಧ ಸ್ಪರ್ಧೆ
ರಾಯಚೂರು: ಇಲ್ಲಿನ ವಾಸವಿ ನಗರದಲ್ಲಿರುವ ಶ್ರೀ ವಾಸವಿ ಕ್ರಿಯೇಟಿವ್ ಟ್ರಸ್ಟಿ ಶ್ರೀರಾಮಕೃಷ್ಣ ಗುರುಕುಲ ಶಾಲೆಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ. 26ರಂದು ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ನಡೆಯುವ ಧ್ವಜಾರೋಹಣದಲ್ಲಿ ಟ್ರಸ್ಟಿನ ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳ ಪಾಲಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದ್ದು, ಜ.24ರಿಂದ ಜ.26ರವರೆಗೆ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಈ ವೇಳೆ ಆಯೋಜಿಸಿದ್ದು, ವಿಜೇತರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಇಂದು ಸಭೆ
ರಾಯಚೂರು: ನಗರದಲ್ಲಿ ಜ.26ರಂದು ಆಚರಿಸುವ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜ.18ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂದು ಬೆಳಗ್ಗೆ 11ಕ್ಕೆ ಪೂರ್ವಭಾವಿ ಸಭೆಯು ನಡೆಯಲಿದ್ದು,ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.