ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶಿಕ್ಷಣ ಗುಣಮಟ್ಟದ ಸುಧಾರಣೆಗೆ ಶ್ರಮಿಸಲು ಶಿಕ್ಷಕರಿಗೆ ಕರೆ

Rashmi Kasaragodu
Updated On : 18 Jan 2014, 12:22 pm

ರಾಯಚೂರು: ಶೈಕ್ಷಣಿಕ ಗುಣಮಟ್ಟದ ಸುಧಾರಣೆ ನಿಟ್ಟಿನಲ್ಲಿ ಶಿಕ್ಷಕರು ನಿರಂತರ ಶ್ರಮಿಸುವಂತೆ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ರಾಜಗೋಪಾಲಾಚಾರ್ಯ ಕರೆ ನೀಡಿದರು.
ನಗರದಲ್ಲಿ ಈಚೆಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿ, ದೇಶದ ವಿವಿಧ ಭಾಗದ ಜನರ ಮಧ್ಯೆ ಸಂಪರ್ಕ ಭಾಷೆಯಾಗಿ ಹಿಂದಿ ಬಳಕೆ ಮಾಡುವಲ್ಲಿ ಎಲ್ಲರೂ ಗಮನಹರಿಸಬೇಕೆಂದರು.
ಮಾಜಿ ಎಂಲ್ಸಿ ಶಶಿಲ್ ನಮೋಶಿ ಮಾತನಾಡಿ, ಹಿಂದಿ ಭಾಷಾ ಶಿಕ್ಷಕರ ಸಂಘದ ಪದಾಕಾರಿಗಳು ಭಾಷೆಯ ಬೆಳವಣಿಗೆ ಶ್ರಮಿಸಬೇಕು. ಶಿಕ್ಷಣ ಇಲಾಖೆಯಲ್ಲಿ ವಿವಿಧ ವಿಷಯಗಳಿಗೆ ಪರಿವೀಕ್ಷಕರನ್ನು ನೇಮಿಸುವಂತೆ ಹಿಂದಿಗೂ ಒಬ್ಬ ವಿಷಯ ಪರೀವೀಕ್ಷಕರ ನೇಮಕಕ್ಕೆ ಒತ್ತಾಯಿಸಿದರು.
ಶೈಕ್ಷಣಿಕ ಕಾರ್ಯಾಗಾರವನ್ನು ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಶ ಮದ್ಲಾಪುರ ಉದ್ಘಾಟಿಸಿದರು. ಗುಲ್ಬರ್ಗದ ಸಾರ್ವಜನಿಕ ಶಿಕ್ಷಣ ಇಲಾಖೆ ಸಹ ನಿರ್ದೇಶಕ ಬಾಲರಾಜ್, ನಗರಸಭೆ ಅಧ್ಯಕ್ಷೆ ಮಹಾದೇವಿ, ಬಿಇಒ ಮಲ್ಲಿಕಾರ್ಜುನ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವ ಸೇರಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಹಿಂದಿ ಭಾಷಾ ಶಿಕ್ಷಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement