ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸುದ್ದಿಸಂಕ್ಷೇಪ

Mainashree
Updated On : 23 Jan 2014, 11:53 am

ಅಪಘಾತದಲ್ಲಿ ವ್ಯಕ್ತಿ  ಸಾವು
ರಾಯಚೂರು: ಸಿಂಧನೂರು ತಾಲೂಕಿನ ಮುಚ್ಚಳ ಕ್ಯಾಂಪಿನಲ್ಲಿ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವಿಗೀಡಾಗಿದ್ದಾನೆ.ಮೃತನನ್ನು ಜೈನುದ್ದೀನ್ ಎಂದು ಗುರುತಿಸಲಾಗಿದೆ. ಈತ ರಸ್ತೆಯ ಬದಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದ್ದು, ಅದರಿಂದ ತೀವ್ರ ಗಾಯಗೊಂಡ ಆತನನ್ನು ಸಿಂಧನೂರಿನ ಆಸ್ಪತ್ರೆಗೆ ಸೇರಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸಿಂಧನೂರು ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಡಿಕ್ಕಿ: ವ್ಯಕ್ತಿ ಸಾವು
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿಯಾಗಿ ಸಾವಿಗೀಡಾಗಿದ್ದಾನೆ.ಮೃತನನ್ನು ಶಿವಮೂರ್ತಿ ಎಂದು ಗುರುತಿಸಲಾಗಿದೆ. ಈತ ರಸ್ತೆ ದಾಟುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಲಾರಿಯು ನಿಯಂತ್ರಣ ತಪ್ಪಿ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆಯೇ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.ಗಬ್ಬೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವ್ಯಕ್ತಿ ಆತ್ಮಹತ್ಯೆ
ರಾಯಚೂರು: ದೇವದುರ್ಗ ತಾಲೂಕಿನ ಜಾಗೀರಜಾಡಲದಿನ್ನಿ ಗ್ರಾಮದಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತನನ್ನು ಬಸವರಾಜ ಎಂದು ಗುರುತಿಸಲಾಗಿದೆ. ಈತನಿಗೆ ಮದುವೆಯಾಗಲಿಲ್ಲ ಎಂದು ಮನನೊಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಾಗ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ದೇವದುರ್ಗ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಸಾವು: ಪರಿಹಾರಕ್ಕೆ ಒತ್ತಾಯ
ದೇವದುರ್ಗ: ವಿದ್ಯುತ್ ಸ್ಪರ್ಶದಿಂದ ಕೆಳಗೆ ಬಿದ್ದು ಮೃತಪಟ್ಟ ಲೈನ್‌ಮೆನ್ ಮೈಲಾರಿ ಏಗನೂರು ಅವರ ಕುಟುಂಬಕ್ಕೆ ಜೆಸ್ಕಾಂ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಯುವಜನ ರಂಗ ಒತ್ತಾಯಿಸಿದೆ. ಈ ಕುರಿತು ಜೆಸ್ಕಾಂನ ಹಿರಿಯ ಅಧಿಕಾರಿಗೆ ಸಂಘಟನೆ ಜಿಲ್ಲಾಧ್ಯಕ್ಷ ಬಸವರಾಜ ಹುರಕಡ್ಲಿ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಜ.17ರಂದು ತಾಲೂಕಿನ ಗಲಗ ಗ್ರಾಮದಲ್ಲಿ ಕರ್ತವ್ಯದ ಮೇಲಿದ್ದ ಲೈನ್‌ಮೆನ್ ಮೈಲಾರಿ ಏಗನೂರು ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.
ಗಲಗ ಗ್ರಾಮದ ಲೈನ್‌ಮೆನ್ ಮೈಲಾರಿ ಸಾವಿಗೆ ವಿದ್ಯುತ್ ಉಪ ಕೇಂದ್ರದ ಶಾಖಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಅವರು, ಕಾಮಗಾರಿಯ ಬಗ್ಗೆ ತಿಳಿಸಿ ದುರಸ್ತಿಗೆ ತೆರಳಿದ್ದರೂ ಮುಂಜಾಗ್ರತೆ ಮೇಲಧಿಕಾರಿ ಮುನ್ನೆಚ್ಚರಿಕೆ ವಹಿಸದಿದ್ದರಿಂದ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿದ್ದು, ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಲೈನ್‌ಮೆನ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಕೊಪ್ಪರ್, ಮೌನೇಶ ಸಾಗರ ಹಿರೇಬೂದೂರು, ಶಿವರಾಜ ಮೇಸ್ತ್ರಿ ಬಿ. ಗಣೇಕಲ್, ಮಲ್ಲಿಕಾರ್ಜುನ ದಳವಾಯಿ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement