ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಡದಂಡೆ ನೀರಿನ ಸಮಸ್ಯೆ; ಇಂದು ನಿಯೋಗ

Mainashree
Updated On : 24 Jan 2014, 11:47 am

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯ ಮಾನವಿ ಮತ್ತು ರಾಯಚೂರು ತಾಲೂಕಿನಲ್ಲಿ ರೈತರು ಬೆಳೆದ ಬೆಳೆಗೆ ಸಮರ್ಪಕ ನೀರೊದಗಿಸುವಂತೆ ಆಗ್ರಹಿಸಿ ನೀರಾವರಿ ಸಚಿವರ ಬಳಿ ಜ.24ರಂದು ನಿಯೋಗ ತೆರಳುತ್ತಿರುವುದಾಗಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ತಿಳಿಸಿದ್ದಾರೆ.
ಅವರು ಈ ಕುರಿತು ಹೇಳಿಕೆ ನೀಡಿ, ತುಂಗಭದ್ರಾ ಎಡದಂಡೆ ಕಾಲುವೆಯ ಕಡೆಯ ಭಾಗದ ರೈತರ ಬೆಳೆಗಳಿಗೆ ಸಮರ್ಪಕ ನೀರೊದಗಿಸುವಂತೆ ಆಗ್ರಹಿಸಿ ಈಗಾಗಲೇ ನೀರಾವರಿ ಇಲಾಖೆಯ ವಿವಿಧ ಹಂತದ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು. ಈ ಹಿನ್ನೆಲೆಯಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ಅವರಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಲಾಗಿದೆ. ಶಾಸಕರು ರೈತರ ನಿಯೋಗದಲ್ಲಿ ಸಚಿವರ ಬಳಿ ತೆರಳಲು ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement