ಕಸದ ಸಮಸ್ಯೆ ಪರಿಹಾರಕ್ಕೆ ಕ್ರಮದ ಭರವಸೆ
ರಾಯಚೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಸದ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ. ಈ ಕುರಿತು ಸಂಬಂಧಿಸಿದ ಇಲಾಖೆಯಿಂದ ಸಮಗ್ರ ಮಾಹಿತಿ ಪಡೆದು ಕ್ರಮ ಜರುಗಿಸಲಾಗುತ್ತದೆ ಎಂದು ಪ್ರಭಾರಿ ಡಿಸಿ ಹಾಗೂ ಜಿಪಂ ಸಿಇಒ ವಿಜಯ ಜೋತ್ಸ್ನಾ ತಿಳಿಸಿದ್ದಾರೆ. ಈ ಕುರಿತು 'ಕನ್ನಡಪ್ರಭ'ಕ್ಕೆ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಸಮಸ್ಯೆ ನಿವಾರಣೆಗೆ ಅಗತ್ಯ ಗಮನ ಹರಿಸಲಾಗುತ್ತದೆ. ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ವಸ್ತು ಸ್ಥಿತಿ ಮಾಹಿತಿ ಪಡೆದು ಶೀಘ್ರದಲ್ಲಿಯೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.