ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಎಸ್ಸೆಫೈ ಪ್ರತಿಭಟನೆ

Srinivasa Murthy VN
Updated On : 16 Jul 2014, 11:00 am

ದೇವದುರ್ಗ: ತಾಲೂಕಿನಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪಟ್ಟಣದಲ್ಲಿ ಮಂಗಳವಾರ ಎಸ್‌ಎಫ್‌ಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪರಿಹಾರಕ್ಕೆ ನಿರ್ಲಕ್ಷ್ಯ; ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಿಂದ ಶಾಸಕರ ಭವನದ ವರೆಗೆ ನಡೆದ ಪ್ರತಿಭಟನೆಯಲ್ಲಿ ಎಸ್.ಎಫ್.ಐ. ಜಿಲ್ಲಾಧ್ಯಕ್ಷ ಶಬ್ಬೀರ ಜಾಲಹಳ್ಳಿ ಮಾತನಾಡಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಾಲೂಕಿನ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ನಿರ್ಲಕ್ಷ್ಯ ತೋರುತ್ತಿದ್ದಾರೆಂದು ಆರೋಪಿಸಿದರು.
ಸರ್ಕಾರ ಬಡ ದಲಿತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಹೆಚ್ಚು ಮಾಡಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗದಂತೆ ಮಾಡುತ್ತಿದೆ. ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಕೇವಲ 40 ಲಕ್ಷ ಒದಗಿಸಲಾಗಿದೆ. ಅದರಿಂದಾಗಿ ಈಗಾಗಲೇ ಹಿಂದುಳಿದ ತಾಲೂಕಿನ ಪ್ರಗತಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭ ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಮಹ್ಮದ್ ಮುಸ್ತಫಾ ಕಾಟಮಳ್ಳಿ ಮಾತನಾಡಿ, ಡಿಪ್ಲೊಮಾ ಕಾಲೇಜಿಗೆ ಸ್ವಂತ ಕಟ್ಟಡ ಒದಗಿಸಬೇಕು. ವಸತಿ ನಿಲಯಗಳಲ್ಲಿ ಮೂಲ ಸೌಲಭ್ಯ ಒದಗಿಸಬೇಕು. ಬಾಲಕರ ಪ್ರೌಢ ಶಾಲೆಯಲ್ಲಿ ಖಾಲಿಯಿರುವ ವಿಷಯವಾರು ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿದರು. ಎಸ್‌ಎಫ್‌ಐ ತಾಲೂಕು ಸಮಿತಿ ಕಾರ್ಯದರ್ಶಿ ಹನುಮಂತ, ಮೌನೇಶ, ನಾಗರಾಜ ಯಾದವ್, ವಿಜಯ ಆಂದೇಲಿ ಸೇರಿ ಅನೇಕ ವಿದ್ಯಾರ್ಥಿಗಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement