ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಇಲಾಖೆ ಪರೀಕ್ಷೆ: ನಿಷೇಧಾಜ್ಞೆ ಜಾರಿ

Rashmi Kasaragodu
Updated On : 19 Jul 2014, 11:44 am

ರಾಯಚೂರು: ಇಲ್ಲಿಗೆ ಸಮೀಪದ ಯರಮರಸ್‌ನ ಡಯಟ್ ಪರೀಕ್ಷಾ ಕೇಂದ್ರ ಹಾಗೂ ಆನಂದ ಪ್ರೌಢ ಶಾಲೆಯಲ್ಲಿ ಜು. 19ರಿಂದ ಆ.1ರ ವರೆಗೆ ನಡೆಯಲಿರುವ 2014ನೇ ಸಾಲಿನ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗಳ ಹಿನ್ನೆಲೆ ಪರೀಕ್ಷೆ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತು ಜಿಪಂ ಸಿಇಒ ಹಾಗೂ ಪ್ರಭಾರಿ ಡಿಸಿ ವಿಜಯ ಜೋತ್ಸ್ನಾ ಆದೇಶ ಹೊರಡಿಸಿದ್ದು, ಕೇಂದ್ರಗಳಲ್ಲಿ ಯಾವುದೇ ನಕಲು ಮತ್ತು ಅವ್ಯವಹಾರಗಳು ನಡೆಯುವುದನ್ನು ತಡೆಯುವ ಉದ್ದೇಶದಿಂದ ಸದರಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾಗಿ ತಿಳಿಸಿದ್ದಾರೆ. ಸದರಿ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಯಾರೂ ನಿಷೇಧಿತ ಪ್ರದೇಶವನ್ನು ಪ್ರವೇಶಿಸುವಂತಿಲ್ಲ. ಸದರಿ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲ ಜೆರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ತರಬೇತಿಗಾಗಿ ಹೆಸರು ನೋಂದಣಿಗೆ ಸೂಚನೆ
ರಾಯಚೂರು: ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ ಬಾಗಲಕೋಟೆ ವತಿಯಿಂದ ಮಾವು, ಬಾಳೆ, ಪಪ್ಪಾಯ ಮತ್ತು ಚಿಕ್ಕು (ಸಪೋಟಾ) ಹಣ್ಣುಗಳ ಬೆಳೆಗಳ ಕುರಿತು ಮೂರು ದಿನಗಳ ತರಬೇತಿ ಶಿಬಿರವು ಜುಲೈ-ಆಗಸ್ಟ್ ನಲ್ಲಿ ಆಯೋಜಿಸಿದ್ದು ತರಬೇತಿಯಲ್ಲಿ ಪಾಲ್ಗೊಳ್ಳಲಿಚ್ಚಿಸುವವರು ಹೆಸರು ನೋಂದಾಯಿಸಲು ಸೂಚಿಸಲಾಗಿದೆ. ಶಿಬಿರದಲ್ಲಿ ಹಣ್ಣು ಬೆಳೆಗಳ ಅಧಿಕ ಇಳುವರಿಗೆ ಅನುಸರಿಸಬೇಕಾದ ಆಧುನಿಕ ಬೇಸಾಯ ಕ್ರಮಗಳು, ಸಾವಯವ ಕೃಷಿ ತಂತ್ರಜ್ಞಾನ, ಸೂಕ್ತ ನೀರಾವರಿ ಪದ್ಧತಿಗಳು, ಸಂಸ್ಕರಣಾ ಕ್ರಮಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುತ್ತದೆ. ಆಸಕ್ತ ರೈತರು, ರೈತ ಮಹಿಳೆಯರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ತಮ್ಮ ಹೆಸರು, ವಿಳಾಸ, ದೂರವಾಣಿ, ಮೊಬೈಲ್, ಇತ್ಯಾದಿ ವಿವರಗಳೊಂದಿಗೆ ಜು.26ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿವಿವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ ದೂ. 08354-244028, 244048 ಅಥವಾ ಮೊ. 8050502960 ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement