ರಾಯಚೂರು

ಪ್ರೊ. ಅನ್ನಪೂರ್ಣ ವರದಿ ಜಾರಿಗೆ ಶ್ರಮ

ಕ.ಪ್ರ. ವಾರ್ತೆ ್ಣ ರಾಯಚೂರು ್ಣ ಜು. 20
ರಾಜ್ಯದಲ್ಲಿ ಮಡಿವಾಳ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರೊ. ಅನ್ನಪೂರ್ಣ ವರದಿ ಜಾರಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಭರವಸೆ ನೀಡಿದರು.
ವರು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಲೋಕಸಭಾ, ವಿಧಾನ ಪರಿಷತ್ ಮತ್ತು ವಿಧಾನಸಭಾ ಸದಸ್ಯರಿಗೆ ಸನ್ಮಾನ ಸಮಾರಂಭ ಉದ್ದೇಶಿಸಿ ಮಾತನಾಡಿ, ಸುಮಾರು 20 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿರುವ ಮಡಿವಾಳ ಸಮಾಜದ ಏಳಿಗೆಗೆ ಅಗತ್ಯ ಅಂಶಗಳನ್ನು ಒಳಗೊಂಡಿರುವ ವರದಿಯನ್ನು ಜಾರಿಗೊಳಿಸುವ ಬಗ್ಗೆ ಜಿಲ್ಲೆಯ ಶಾಸಕರು, ಸಂಸದರು ಪ್ರಯತ್ನ ನಡೆಸುವುದಾಗಿ ಹೇಳಿದರು.
ಹಿಂದುಳಿದ ಜಾತಿಗಳನ್ನು ಗುರುತಿಸಿ ಅಭಿವೃದ್ಧಿಗೆ ಅನೇಕ ಸರ್ಕಾರಗಳು ಆದ್ಯತೆ ನೀಡುತ್ತಿವೆ. ಎಲ್ಲ ಜಾತಿ- ಧರ್ಮಕ್ಕೆ ಬೇಕಾದ ಸವಲತ್ತುಗಳನ್ನು ಕಲ್ಪಿಸುವಲ್ಲಿ ಸರ್ಕಾರ ನಿರತಗೊಂಡಿದೆ. ಅದೇ ರೀತಿ ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಜಾರಿಯಾಗಿರುವ ಕಲಂ 371(ಜೆ) ಅಡಿ ವಿಶೇಷ ಸ್ಥಾನಮಾನ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ.
ಮೀಸಲಾತಿಯಿಂದ ಅನುಕೂಲ: ಈ ಮೀಸಲಾತಿಯಿಂದಾಗಿ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಶಿಕ್ಷಣದಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಮಡಿವಾಳ ಸಮಾಜದ ಯುವಕರು ಹಾಗೂ ಮುಖಂಡರು ಸಾಕಷ್ಟು ಸಹಾಯ ಮಾಡಿದ್ದು, ಅವರಿಗೆ ಬೇಕಾದ ಸವಲತ್ತು ಕಲ್ಪಿಸಲು ಶ್ರಮಿಸುವುದಾಗಿ ತಿಳಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಸಮಾಜದ ಹಿರಿಯ ಮುಖಂಡರ ಎನ್. ಶಂಕ್ರಪ್ಪ ವಕೀಲರು ಮಾತನಾಡಿ, ಎಲ್ಲ ಸಮಾಜದ ಜನರಿಗೆ ತಾಯಿಯಂತೆ ಸೇವೆ ಮಾಡುವ ಕುಲವೃತ್ತಿಯನ್ನು ಹೊಂದಿರುವ ಮಡಿವಾಳ ಸಮಾಜಕ್ಕೆ ಸರ್ಕಾರದಿಂದ ಲಭ್ಯವಾಗಬೇಕಾದ ಸವಲತ್ತು ಸಿಗುತ್ತಿಲ್ಲ. ದೇಶದ  ಇತರ 17 ರಾಜ್ಯಗಳಲ್ಲಿ ಮಡಿವಾಳ ಸಮಾಜದವರನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದರೆ ದೇಶದ ದಕ್ಷಿಣದ ಕೆಲ ರಾಜ್ಯಗಳಲ್ಲಿ ಇದು ಜಾರಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಾನ್ವಿತರಿಗೆ ಸನ್ಮಾನ: ಸಮಾರಂಭದಲ್ಲಿ ಮಡಿವಾಳ ಸಮಾಜದಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಾಧನೆ ಮೆರೆದ ಮಡಿವಾಳ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಎಂಎಲ್ಸಿ ಎನ್.ಎಸ್. ಬೋಸರಾಜು, ರಾಯಚೂರು ಸಂಸದ ಬಿ.ವಿ. ನಾಯಕ, ಶಾಸಕ ಡಾ. ಶಿವರಾಜ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಜಿ.ಸೂಗಪ್ಪ ವಹಿಸಿದ್ದರು. ಸಂಸದ ಬಿ.ವಿ.ನಾಯಕ್, ಶಾಸಕ ಡಾ. ಶಿವರಾಜ್ ಪಾಟೀಲ್, ಸಮಾಜದ ರಾಜ್ಯಾಧ್ಯಕ್ಷ ಸಿ.ನಂಜಪ್ಪ, ಡಿವೈಎಸ್ಪಿ ವಿಜಯಕುಮಾರ ಬಿ. ಮಡಿವಾಳರ್, ಸಿಎಂಸಿ ಸ್ಥಾಯಿ ಸಮಿತಿ ಅಧ್ಯಕ್ಷ ನರಸಪ್ಪ ಯಕ್ಲಾಸಪುರ, ಸದಸ್ಯ ರಾಮು ಗಿಲ್ಲೇರಿ, ಸಮಾಜದ ಗೌರವಾಧ್ಯಕ್ಷ ಎಂ.ಹುಸೇನಪ್ಪ, ಗ್ರಾಮೀಣ ಅಧ್ಯಕ್ಷ ಲಕ್ಷ್ಮಣ ಸಗಮಕುಂಟಾ, ಸಮಾಜದ ಮುಖಂಡರು, ಹಿರಿಯರು, ವಿದ್ಯಾರ್ಥಿಗಳು, ಪಾಲಕರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!