ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅರಿಷಡ್ವರ್ಗ ನಿಯಂತ್ರಣಕ್ಕೆ ಉಪವಾಸ

Rashmi Kasaragodu
Updated On : 22 Jul 2014, 11:39 am

ಸಿಂಧನೂರು: ವ್ಯಕ್ತಿಯ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುವ ಅರಿಷಡ್ವರ್ಗಗಳು ಮತ್ತು ಇಂದ್ರಿಯಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಉಪವಾಸ ಅತ್ಯಂತ ಸಹಕಾರಿಯಾಗಲಿದೆ ಎಂದು ಖ್ಯಾತ ಪ್ರವಚನಕಾರ ಲಾಲ್ ಹುಸೇನ್ ಕಂದಗಲ್ ಅಭಿಪ್ರಾಯಪಟ್ಟರು. ನಗರದ ಮಸ್ಜೀದ್-ಏ-ಹುದಾದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಏರ್ಪಡಿಸಿದ್ದ ಇಫ್ತಿಯಾರ್ ಕೂಟದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಪವಿತ್ರ ರಂಜಾನ್ ತಿಂಗಳಿನಲ್ಲಿ ಹಲವರ ಪ್ರಾರ್ಥನೆಯಿಂದಾಗಿ ನಾಡಿನಲ್ಲಿ ಉತ್ತಮ ಮಳೆಯಾಗಿ ಸಮೃದ್ಧವಾಗಲಿ ಎಂದು ಆಶಿಸಿದರು. ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿ, ಇಸ್ಲಾಂ ಧರ್ಮದಲ್ಲಿನ ರೋಜಾ ಆಚರಣೆಯು ಬಡವರ ಹಸಿವಿನ ನೋವನ್ನು ಪ್ರತಿಯೊಬ್ಬರಿಗೂ ಮನದಟ್ಟು ಮಾಡುತ್ತದೆ ಎಂದರು. ರಾಜ್ಯ ಕೃಷಿ ಬೆಲೆ ಆಯೋಗದ ಸದಸ್ಯ ಹನುಮನಗೌಡ ಬೆಳಗುರ್ಕಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಎಸ್. ಶರಣೇಗೌಡ, ಪ್ರೊ. ಶಾಶ್ವತಸ್ವಾಮಿ ಮುಕ್ಕುಂದಿಮಠ, ಕೆ. ಮರಿಯಪ್ಪ, ರಾಜಶೇಖರ ಪಾಟೀಲ್, ಶಾಮಣ್ಣ ನಾಯಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement