ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಧ್ಯಕ್ಷರ ಬದಲಾವಣೆಗೆ ಶೇಕ್ಷಾಖಾದ್ರಿ ಒತ್ತಾಯ

Rashmi Kasaragodu
Updated On : 23 Jul 2014, 12:38 pm

ಸಿಂಧನೂರು: ತಾಲೂಕಿನ ಗುಂಡಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪಂಪನಗೌಡ ಕಾನೂನುಬಾಹಿರವಾಗಿ ಅಧಿಕಾರದಲ್ಲಿ ಮುಂದುವರೆದಿದ್ದು, ಅವರ ಬದಲಾವಣೆಯಾಗುವವರೆಗೂ ಬಿಸಿಯೂಟ ನೌಕರರ ಮೇಲೆ ಯಾವುದೇ ಕ್ರಮ ಕೈಗೊಳ್ಳದಂತೆ ಬಿಸಿಯೂಟ ನೌಕರರ ತಾಲೂಕು ಗೌರವಾಧ್ಯಕ್ಷ ಶೇಕ್ಷಾಖಾದ್ರಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗುಂಡಾ ಗ್ರಾಮದ ಶಾಲೆಯಲ್ಲಿಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ದುರುದ್ದೇಶದಿಂದ ಅಡುಗೆಯವರನ್ನು ತೆಗೆದು ಹಾಕಲು ಪ್ರಯತ್ನ ನಡೆಸಿದ್ದಾರೆ. ಅಡುಗೆ ಮಾಡುವ ಸಮಯದಲ್ಲಿ ಹಲ್ಲಿ ಬಿದ್ದಿರುವುದನ್ನು ಗಮನಿಸಿ ಮಕ್ಕಳಿಗೆ ಊಟ ಬಡಿಸುವುದನ್ನು ಕೂಡಲೇ ನಿಲ್ಲಿಸಲಾಗಿತ್ತು. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಯಾವುದೇ ತೊಂದರೆಯಾಗಿಲ್ಲ. ಆದರೂ ಅವರನ್ನು ತೆಗೆದು ಹಾಕಬೇಕೆಂಬ ಉದ್ದೇಶವನ್ನು ಅವರು ಹೊಂದಿದ್ದಾರೆ ಎಂದು ಟೀಕಿಸಿದ್ದಾರೆ. ಬಿಸಿಯೂಟ ನೌಕರರನ್ನು ತೆಗೆದು ಬೇರೆಯವರನ್ನು ನೇಮಕ ಮಾಡಿದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ಶೇಕ್ಷಾಖಾದ್ರಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement