ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸರ್ಕಾರ ಮಟ್ಟದಲ್ಲಿ ಚರ್ಚೆ: ಮನವರಿಕೆ

Rashmi Kasaragodu
Updated On : 25 Jul 2014, 11:37 am

ರಾಯಚೂರು: ರಾಜೋಳಿ ಬಂಡಾ ತಿರುವು ಯೋಜನೆಯ ಅಣೆಕಟ್ಟೆ ಆಧುನೀಕರಣಕ್ಕೆ ವಿರೋಧ ವ್ಯಕ್ತವಾಗಿರುವುದರಿಂದ ಉಂಟಾದ ಬಿಕ್ಕಟ್ಟಿಗೆ ಮೂರು ರಾಜ್ಯ ಸರ್ಕಾರಗಳು ಚರ್ಚಿಸಿ ಪರಿಹರಿಸಿಕೊಳ್ಳಬೇಕಿದೆ. ಈ ವಿಷಯವನ್ನು ಗುರುವಾರ ಭೇಟಿ ಮಾಡಿದ ಮಹೆಬೂಬ್ ನಗರ ಡಿಸಿ ಗಿರಿಜಾಶಂಕರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾಗಿ ಜಿಲ್ಲಾಧಿಕಾರಿ ವಿಜಯ ಜೋತ್ಸ್ನಾ ತಿಳಿಸಿದರು.
ನಗರದಲ್ಲಿ ಗುರುವಾರ ಮಹೆಬೂಬ್ ನಗರ ಡಿಸಿ ಜತೆ ನಡೆಸಿದ ಮಾತುಕತೆಯ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಈ ಬಿಕ್ಕಟ್ಟಿನ ವಿಚಾರದಲ್ಲಿ ಜಿಲ್ಲಾಡಳಿತವು ಯಾವುದೇ ನಿರ್ಧಾರ ತಳೆಯದಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಹೆಬೂಬ್ ನಗರ ಜಿಲ್ಲಾಧಿಕಾರಿಗಳಿಗೆ ಅದೇ ವಿಷಯವನ್ನು ತಿಳಿಸಿದ್ದು, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ಮಾತ್ರ ಅವರೊಂದಿಗೆ ಚರ್ಚಿಸಿದ್ದಾಗಿ ತಿಳಿಸಿದರು.
ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ಮೂರೂ ರಾಜ್ಯಗಳು ಸೇರಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿರುವುದರಿಂದ ಜಿಲ್ಲಾಡಳಿತಗಳ ಮಟ್ಟದಲ್ಲಿ ಮಾತುಕತೆಗೆ ಅವಕಾಶವಿಲ್ಲ. ಹೀಗಾಗಿ ಕರ್ನಾಟಕ ಸರ್ಕಾರದ ಸೂಚನೆಯಂತೆ ತಾವು ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಇದೊಂದು ಕೇವಲ ಸೌಹಾರ್ದಯುತ ಭೇಟಿಯಾಗಿತ್ತು ಎಂದಷ್ಟೇ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್ಪಿ ಎಂ.ಎನ್. ನಾಗರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement