ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸೌಹಾರ್ದಯುತ ರಂಜಾನ್ ಆಚರಿಸಿ: ಡಿವೈಎಸ್ಪಿ ಹದ್ದಣ್ಣವರ್

Rashmi Kasaragodu
Updated On : 25 Jul 2014, 11:38 am

ಲಿಂಗಸ್ಗೂರು: ಮುಸ್ಲಿಮರು ಪವಿತ್ರ ರಂಜಾನ್ ಹಬ್ಬವನ್ನು ಎಲ್ಲರೂ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಡಿವೈಎಸ್ಪಿ ಅನಿತಾ ಹದ್ದಣ್ಣವರ್ ಕರೆ ನೀಡಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಇಲಾಖೆ ವತಿಯಿಂದ ಗುರುವಾರ ರಂಜಾನ್ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಟ್ಟಣದಲ್ಲಿ ಹಿಂದೂ, ಮುಸ್ಲಿಮರು ಇದುವರೆಗೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಯನ್ನು ಶಾಂತಿ, ಸೌಹಾರ್ದಯುತವಾಗಿ ಆಚರಿಸುತ್ತಾ ಬರಲಾಗಿದೆ. ಅದೇ ರೀತಿ ರಂಜಾನ್ ಸೇರಿ ಮುಂದೆ ಬರುವ ಹಿಂದು, ಮುಸ್ಲಿಮರ ಹಬ್ಬ-ಹರಿ ದಿನಗಳ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸಹಕಾರ ನೀಡಬೇಕು. ದುಷ್ಕೃತ್ಯಗಳು ಕಂಡು ಬಂದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕೆಂದು ಹೇಳಿದರು.
ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ ಮಾತನಾಡಿ, ಸೌಹಾರ್ದಯುತವಾಗಿ ಆಚರಿಸಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಸಿಪಿಐ ವರದರಾಜು, ಪಿಎಸ್ಐ ಸುಶೀಲ್ಮಾರ, ಮುಖಂಡರಾದ ಲಾಲ ಅಹ್ಮದ್ ಸಾಬ, ರಮೇಶ ಜೋಷಿ ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement