ಹೋಬಳಿ ಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಚಾಲನೆ
ರಾಯಚೂರು: ಜಿಪಂ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ರಾಯಚೂರು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದಿನ್ನಿ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ತಾಲೂಕಿನ ದಿನ್ನಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮರ್ಚಟ್ಹಾಳ್ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟ ಆಯೋಜಿಸಲಾಗಿತ್ತು. ಜಿಪಂ ಸದಸ್ಯ ಮಲ್ಲೇಶ ನಾಯಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮರ್ಚಟ್ಹಾಳ್ ಗ್ರಾಪಂ ಅಧ್ಯಕ್ಷ ಹನುಮಂತ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದರು. ಅಧ್ಯಕ್ಷತೆ ಶಾಲೆ ಮುಖ್ಯಗುರು ರಮೇಶ ರಾಥೋಡ್ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಮಲಮ್ಮ ಶ್ರೀನಿವಾಸ, ದೈಹಿಕ ಶಿಕ್ಷಕ ಬಸವರಾಜ ಬೋರೆಡ್ಡಿ, ನೀರಜ್, ದಿನ್ನಿ ಶಾಲೆ ಎಸ್ಡಿಎಂಸಿ ಅಧ್ಯಕ್ಷ ಚಿದಾನಂದ ನಾಯಕ, ಗ್ರಾಮದ ರೈತ ಸಂಘದ ಅಧ್ಯಕ್ಷ ಶಾಂತಪ್ಪ ನಾಯಕ, ಶರಣಗೌಡ ಮಾಲಿ ಪಾಟೀಲ್, ವಿನೋದ ಕುಮಾರ ಉಪಸ್ಥಿತರಿದರು.