ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿದ್ಯುತ್ ಸ್ಪರ್ಶದಿಂದ ಸಾವು: ಪರಿಹಾರಕ್ಕೆ ಕರವೇ ಒತ್ತಾಯ

Mainashree
Updated On : 2 Jun 2014, 11:43 am

ರಾಯಚೂರು: ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ಈಚೆಗೆ ವಿದ್ಯುತ್ ದುರಸ್ತಿ ಕಾರ್ಯದಲ್ಲಿದ್ದ ವ್ಯಕ್ತಿ ವಿದ್ಯುತ್ ಸ್ಪರ್ಷದಿಂದ ಸಾವಿಗೀಡಾ ಗಿದ್ದು, ಮೃತನ ಕುಟುಂಬದವರಿಗೆ ಜೆಸ್ಕಾಂನಿಂದ ಪರಿಹಾರ ನೀಡುವಂತೆ ಕರವೇ ಆಗ್ರಹಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕರವೇ ಜಿಲ್ಲಾಧ್ಯಕ್ಷ ಅಶೋಕಕುಮಾರ ಜೈನ್, ವಿದ್ಯುತ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಲೈನ್‌ಮೆನ್‌ನ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಯಲ್ಲಪ್ಪನ ಸಾವಿಗೆ ಕಾರಣವಾಗಿದೆ. ಕೂಡಲೇ ಶಾಸಕರು, ಜೆಸ್ಕಾಂ ಇಲಾಖೆಯಿಂದ ಪರಿಹಾರ ಕೊಡಿಸಬೇಕು. ತಪ್ಪಿದಲ್ಲಿ ಸಂಘಟನೆಯು ಹೋರಾಟಕ್ಕೆ ಮುಂದಾಗಲಿದೆ ಎಂದು ಎಚ್ಚರಿಸಿದ್ದಾರೆ.
ಮದ್ಯ ವ್ಯಸನಿ ಸಾವು
ರಾಯಚೂರು: ತಾಲೂಕಿನ ಉಲ್ಕಬಂಡ ತಾಂಡಾದಲ್ಲಿ ಮದ್ಯ ವ್ಯಸನಿಯೊಬ್ಬ ಕಾಲುವೆಯಲ್ಲಿ ಬಿದ್ದು ಗಾಯಗೊಂಡು ಸಾವನ್ನಪ್ಪಿದ್ದಾನೆ.
ಮೃತನನ್ನು ಈಶಪ್ಪ(43) ಎಂದು ಗುರುತಿಸಲಾಗಿದೆ. ಈತ ಮದ್ಯದ ಅಮಲಿನಲ್ಲಿ ಗ್ರಾಮದ ಮುದುಕಪ್ಪನ ಹೊಲದ ಬಳಿಯ ನಾರಾಯಣಪುರ ಬಲದಂಡೆ 9ಎ ಕಾಲುವೆಯನ್ನು ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರಿಂದ ಕಾಲುವೆಯಲ್ಲಿನ ಕಲ್ಲು ತಲೆಗೆ ಬಡಿದು ತೀವ್ರ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗದಲ್ಲಿ ಸಾವಿಗೀಡಾಗಿದ್ದಾನೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement