ನೀರು ಅಕ್ರಮ ಬಳಕೆ: ಧರಣಿ 6ನೇ ದಿನಕ್ಕೆ
ಕ.ಪ್ರ. ವಾರ್ತೆ ್ಣ ಸಿಂಧನೂರು ್ಣ ಜೂ.2
ತುಂಗಭದ್ರಾ ಎಡದಂಡೆ ಉಪ ಕಾಲುವೆಗೆ ಅಕ್ರಮವಾಗಿ ಅಳವಡಿಸಿದ ಪೈಪಗಳನ್ನು ತೆಗೆದು ಹಾಕಲು ಒತ್ತಾಯಿಸಿ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಜಂಟಿ ಆಶ್ರಯದಲ್ಲಿ ನೀರಾವರಿ ಇಲಾಖೆ ಎದುರು ನಡೆಸಿರುವ ಅನಿರ್ದಿಷ್ಟಾವಧಿ ಧರಣಿ 6ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನಾ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಿಂಧನೂರಿನ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ, ಪ್ರತಿಭಟನಾ ನಿರತರೊಂದಿಗೆ ಚರ್ಚಿಸಿದರು. ಸ್ಥಳಕ್ಕೆ ನೀರಾವರಿ ಅಧಿಕಾರಿಗಳನ್ನು ಕರೆಸಿಕೊಂಡು ತರಾಟೆಗೆ ತೆಗೆದುಕೊಂಡರು.
ನಂತರ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ರೀತಿಯ ಸಮಸ್ಯೆಗಳು ಉದ್ಭವಿಸುತ್ತವೆ. ಈಗಾಗಲೇ ಅಧಿಕಾರಿಗಳೊಂದಿಗೆ ಸಮಸ್ಯೆಯ ಬಗ್ಗೆ ಚರ್ಚಿಸಲಾಗಿದೆ. ಎಲ್ಲೆಲ್ಲಿ ಅಕ್ರಮ ಪೈಪ್ಗಳಿವೆ ಎಂದು ಪತ್ತೆ ಹಚ್ಚಿ ಅವುಗಳನ್ನು ತೆಗೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಧರಣಿಯನ್ನು ನಿಲ್ಲಿಸುವಂತೆ ಮನವಿ ಮಾಡಿದರು. ಆದರೆ ಧರಣಿನಿರತರು ತಮ್ಮ ಬೇಡಿಕೆ ಸಂಪೂರ್ಣ ಈಡೇರುವವರೆಗೆ ಧರಣಿ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ಅಮೀನ್ಪಾಷಾ ದಿದ್ದಿಗಿ, ರಮೇಶ ಪಾಟೀಲ, ಬೇರ್ಗಿ, ಎಂ.ಗಂಗಾಧರ, ಡಿವೈಎಸ್ಪಿ ಸೂರ್ಯವಂಶಿ, ಪಿಎಸ್ಐ ಬಾಲನಗೌಡ ಮತ್ತಿತರರು ಇದ್ದರು.