ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಸ್. ಶರಣೇಗೌಡ ನಯೋಪ್ರಾ ಅಧ್ಯಕ್ಷ

Mainashree
Updated On : 7 Jun 2014, 10:14 am

ಸಿಂಧನೂರು: ಸ್ಥಳೀಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನಗರಸಭೆ ಮಾಜಿ ಸದಸ್ಯ ಎಸ್. ಶರಣೇಗೌಡ ನೇಮಕಗೊಂಡಿದ್ದಾರೆ. ಸದಸ್ಯರಾಗಿ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮುರ್ತಜಾ ಹುಸೇನ್, ಯುವ ಕಾಂಗ್ರೆಸ್ ಮುಖಂಡರಾದ ವೀರೇಶ ಶಿಳ್ಳಿ, ಅಮರೇಶ ನಾಯಕ ಅವರನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಅಭಿನಂದನೆ: ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್. ಶರಣೇಗೌಡ ನೇಮಕಗೊಂಡಿರುವುದಕ್ಕೆ ನಿವೃತ್ತ ಪ್ರಾಚಾರ್ಯ ಪ್ರೊ.ಎಸ್.ಜಿ. ಮುಕ್ಕುಂದಿಮಠ, ಚುಸಾಪ ಜಿಲ್ಲಾಧ್ಯಕ್ಷ ಬೀರಪ್ಪ ಶಂಭೋಜಿ, ಕಸಾಪ ಜಿಲ್ಲಾ ಕಾರ್ಯದರ್ಶಿ ಎಸ್. ದೇವೇಂದ್ರಗೌಡ, ಎಐಟಿಯುಸಿ ಮುಖಂಡ ವೆಂಕನಗೌಡ ಗದ್ರಟಗಿ ಮತ್ತಿತರರು ಅಭಿನಂದಿಸಿದ್ದಾರೆ.

ಮುಂಡೆ ನಿಧನಕ್ಕೆ ಸಂತಾಪ
ಸಿಂಧನೂರು: ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ಗೋಪಿನಾಥ ಮುಂಡೆ ಕಾರ್ ಅಪಘಾತದಲ್ಲಿ ಮೃತಪಟ್ಟಿರುವುದಕ್ಕೆ ಬಿಜೆಪಿ ಮುಖಂಡ ಕೊಲ್ಲಾ ಶೇಷಗಿರಿರಾವ್ ಸಂತಾಪ ವ್ಯಕ್ತಪಡಿಸಿದ್ದಾರೆ. ಹೇಳಿಕೆ ನೀಡಿರುವ ಅವರು, ಮುಂಡೆ ಜನಪರ ಆಡಳಿತಗಾರರಾಗಿದ್ದರು. ಅವರ ನಿಧನ ಬಿಜೆಪಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement