ಬಿಸಿ ಊಟ; 22 ಮಕ್ಕಳು ಅಸ್ವಸ್ಥ
ಸಿಂಧನೂರು: ಸಿಂಧನೂರು ತಾಲೂಕಿನ ಗುಂಡಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಬಿಸಿ ಊಟ ಸೇವಿಸಿದ 22 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ವಿದ್ಯಾರ್ಥಿಗಳಾದ ಹನುಮೇಶ, ದೀಪಾ, ಯಂಕಮ್ಮ, ವಿನೋದ, ಚನ್ನಮ್ಮ ಸೇರಿದಂತೆ ಹಲವರು ತುರ್ವಿಹಾಳ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾದರೆ, ಉಳಿದ ವಿದ್ಯಾರ್ಥಿಗಳನ್ನು ತಾವರೆಗೆರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಶುಕ್ರವಾರ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ತಿಳಿಸಿದರು.