ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಕ್ರಮ ಮದ್ಯ ಮಾರಾಟ ತಡೆಗೆ ಗ್ರಾಮಸ್ಥರ ಆಗ್ರಹ

Vishwanath S
Updated On : 10 Jun 2014, 12:30 pm

ಲಿಂಗಸ್ಗೂರು: ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಸಾವು-ನೋವುಗಳು ಸಂಭವಿಸುತ್ತಿದ್ದು, ಕೂಡಲೇ ಇದನ್ನು ತಡೆಗಟ್ಟಿ ಸುವ್ಯವಸ್ಥೆ ಕಾಪಾಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಅಬಕಾರಿ ಇಲಾಖೆ ದ್ವಿತೀಯ ದರ್ಜೆ ಸಹಾಯಕಿ ನಿರ್ಮಲಾರಿಗೆ ಸೋಮವಾರ ಮನವಿ ಸಲ್ಲಿಸಿದರು.
ಗ್ರಾಮದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಸುಮಾರು ಐದಾರು ಕುಟುಂಬ ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿದ್ದು, ಇದರಿಂದ ಸಾರ್ವಜನಿಕರು ವಿಪರೀತ ಕುಡಿತಕ್ಕೆ ಬಲಿಯಾಗಿ ಕೆಲವರು ಮೃತಪಟ್ಟಿದ್ದಾರೆ ಎಂದು ದೂರಿದರು.
ತಾಲೂಕಿನ ನೀರಲಕೇರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಈ ಹಿಂದೆ ಹಲವು ಬಾರಿ ಮನವಿ ಮಾಡಿದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಡುತ್ತಿವೆ. ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮ ಮದ್ಯ ಮಾರಾಟ ತಡೆದು ಅಕ್ರಮ ಮಾರಾಟಗಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಗ್ರಾಮದ ಸ್ತ್ರೀ ಶಕ್ತಿ, ಸ್ವಸಹಾಯ ಸಂಘ ಹಾಗೂ ದಲಿದ ಸಂಘಟನೆ ಸದಸ್ಯರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ವೇಳೆ ಗ್ರಾಮದ ನಾಗಪ್ಪ ಗುಡಿಮನಿ, ನಾಗರೆಡ್ಡಿ ಭೀಮನವರ, ನೀಲಮ್ಮ ಛಲವಾದಿ, ಅಮರಮ್ಮ ಬಿಜ್ಜೂರ, ಭೀಮಮ್ಮ ಮೂಲಿಮನಿ, ಶರಣಮ್ಮ ಆದಾಪೂರ, ದೇವಮ್ಮ ಮೂಲಿಮನಿ, ರೇಣುಕಾ ಮೂಲಿಮನಿ, ಲಕ್ಕಮ್ಮ ತಿರಕವನೂರ, ದುರುಗಮ್ಮ ಮೂಲಿಮನಿ, ಯಮನಮ್ಮ, ಇಂದ್ರಮ್ಮ, ನರಸಪ್ಪ ಪೂಜಾರಿ, ಯಲ್ಲಪ್ಪ ಛಲವಾದಿ, ದುರುಗಪ್ಪ ಡಬ್ಬೇರಮಡು ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement