ರಾಯಚೂರು

ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಮುದಗಲ್: ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಬೇಸತ್ತ ಹೋಬಳಿಯ ನಾಲ್ಕು ಗ್ರಾಮಗಳ ರೈತರು ಸ್ಥಳೀಯ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಾಗಲಾಪುರ ವಿದ್ಯುತ್ ಪ್ರಸರಣ ಕೇಂದ್ರ ವ್ಯಾಪ್ತಿಯ ಉಳಿಮೇಶ್ವರ, ಪಿಕಳಿಹಾಳ, ವ್ಯಾಸನಂದಿಹಾಳ, ಕನ್ನಾಳ ಗ್ರಾಮಕ್ಕೆ ನಿರಂತರ ಜ್ಯೋತಿ ಅಳವಡಿಸಲಾಗಿದೆ. ಆದರೆ ಈ ಯೋಜನೆ ಜಾರಿಗೆ ಬಂದು ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ. ರಾತ್ರಿಯಂತೂ ಒಂದು ತಾಸು ಕೂಡ ವಿದ್ಯುತ್ ನೀಡುತ್ತಿಲ್ಲ. ಇದರಿಂದಾಗಿ ಬಿತ್ತಿದ ಹತ್ತಿ, ಈರುಳ್ಳಿ, ಸಜ್ಜೆ ಬೆಳೆಗಳು ನೀರಿಲ್ಲದೆ ಒಣಗಿ ಹೋಗುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷಾಂತರ ಮೌಲ್ಯದ ಬೆಳೆ ಹಾನಿ: ಪಕ್ಕದ ಊರುಗಳಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಆದರೆ ಕಳೆದ ತಿಂಗಳಿಂದ ಉಳಿಮೇಶ್ವರ, ಪಿಕಳಿಹಾಳ, ವ್ಯಾಸನಂದಿಹಾಳ, ಕನ್ನಾಳ ಗ್ರಾಮಕ್ಕೆ ವಿದ್ಯುತ್ ನೀಡುತ್ತಿಲ್ಲ. ಪದೇಪದೇ ವಿದ್ಯುತ್ ಸಮಸ್ಯೆ ತೀವ್ರಗೊಂಡಿದ್ದರಿಂದ ಇಲಾಖೆಯ ಸಿಬ್ಬಂದಿ ಗಮನಕ್ಕೆ ತಂದರೂ ನಿರ್ಲಕ್ಷ್ಯ ತಾಳಿದ್ದಾರೆ. ಇದರಿಂದಾಗಿ ಲಕ್ಷಾಂತರ ರು. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ರೈತರು ಕಿಡಿಕಾರಿದರು.
ಸ್ಥಳಕ್ಕೆ ಮೇಲಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಹಿಂಪಡೆಯುವದಿಲ್ಲ ಎಂದು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು ಬಿಗಿಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಆಗಮಿಸಿದ ಎಇಇ ರಿಯಾಜ್ ಅಹ್ಮದ್ ವಿದ್ಯುತ್ ಸಂಪರ್ಕಕ್ಕೆ ಅಡಚಣೆಯಾಗುತ್ತಿರುವುದರಿಂದ ಸರಿಯಾಗಿ ನೀಡಲು ಸಾಧ್ಯವಾಗುತ್ತಿಲ್ಲ. ಗಾಳಿಯಿಂದ ಅಲ್ಲಲ್ಲಿ ಸಮಸ್ಯೆಯಾಗಿದ್ದು ತಕ್ಷಣ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ದಿನಕ್ಕೆ 6ರಿಂದ 7 ತಾಸು ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ರೈತರು, ನಿರಂತರ ಜ್ಯೋತಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಆದರೆ ಅಧಿಕಾರಿಗಳು ಇದಕ್ಕೆ ಒಪ್ಪದೆ ಪಂಪಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆಗೆ ಕ್ರಮ ಜರುಗಿಸುವುದಾಗಿ ಹೇಳಿದರು. ಜೆಸ್ಕಾಂ ಜೆಇ ಮುದ್ದನಗೌಡ, ರೈತ ಮುಖಂಡರಾದ ಪತ್ರಪ್ಪಗೌಡ, ಗ್ಯಾನಪ್ಪ ಭಜೇಂತ್ರಿ, ಹನುಮಂತ, ಶಂಕ್ರಪ್ಪ, ರಾಮಣ್ಣ, ಶಿವರಾಯಪ್ಪ ಮುಂತಾದವರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!