ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಹಾಸ್ಟೆಲ್ ಮೂಲ ಸೌಕರ್ಯ ಕಲ್ಪಿಸಲು ರುದ್ರಗೌಡ ಸೂಚನೆ

Rashmi Kasaragodu
Updated On : 21 Jun 2014, 11:42 am

ಲಿಂಗಸ್ಗೂರು: ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಬಿಸಿಎಂ ಇಲಾಖೆಗೆ ಒಳಪಡುವ ವಸತಿ ನಿಲಯಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ನಿಲಯದ ಮೇಲ್ವಿಚಾರಕರಿಗೆ ತಾಪಂ ಹಂಗಾಮಿ ಅಧ್ಯಕ್ಷ ರುದ್ರಗೌಡ ತುರಡಗಿ ಸೂಚಿಸಿದರು.
ಪಟ್ಟಣದ ಪಶು ಸಂಗೋಪನಾ ಇಲಾಖೆ ಹಿಂದುಗಡೆ ಇರುವ ಬಾಲಕಿಯರ ವಸತಿ ನಿಲಯಗಳಿಗೆ ಶುಕ್ರವಾರ ಭೇಟಿ ನೀಡಿ ವಸತಿ ನಿಲಯ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಬಳಿಕ ನಿಲಯ ಮೇಲ್ವಿಚಾರಕರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.
ಸರ್ಕಾರ ವಸತಿ ನಿಲಯಗಳಿಗೆ ನೀಡಿದ ಸೌಲಭ್ಯ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪಬೇಕು. ನಿಲಯಗಳಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಗುಣಮಟ್ಟದ ಆಹಾರ ಒದಗಿಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ನೀಡುತ್ತಿದೆ. ಆದರೆ ವಸತಿ ನಿಲಯದಲ್ಲಿಯೂ ನೀಡುತ್ತಿರುವ ಪ್ರಯುಕ್ತ ಸರ್ಕಾರದ ಅನುದಾನ ಪೋಲಾಗುತ್ತಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಚರ್ಚಿಸಿ ವಸತಿ ನಿಲಯಗಳಿಗೆ ಮಧ್ಯಾಹ್ನ ಊಟದ ಬದಲು ಸಂಜೆ ಉಪಹಾರ ನೀಡುವ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement