ವಸತಿ ಯೋಜನೆ: ಅನಿರ್ದಿಷ್ಟ ಅವಧಿ ಧರಣಿ ನಾಳೆಯಿಂದ
ರಾಯಚೂರು: ವಸತಿ ಯೋಜನೆ ಅಡಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಅಕ್ರಮದಲ್ಲಿ ಶಾಮೀಲಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹಿಸಿ ಜೂ.23ರಿಂದ ಜಿಪಂ ಎದುರು ಅನಿರ್ದಿಷ್ಟಾವಧಿ ಧರಣಿ ಆಯೋಜಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಿಳಿಸಿದೆ. ಈ ಕುರಿತು ಜಿಪಂ ಸಿಇಒಗೆ ದೂರು ಸಲ್ಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಬಡತನ ರೇಖೆಗಿಂತ ಕೆಳಗಿನವರಿಗೆ ಮನೆಗಳನ್ನು ಮಂಜೂರು ಮಾಡುವಲ್ಲಿ ಅಕ್ರಮ ನಡೆದಿವೆ. ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ.
ನರ್ಹರಿಗೆ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ದೂರಿದೆ. ಅದೇ ರೀತಿ ಮನೆ ನಿರ್ಮಿಸಿಕೊಂಡ ಬಡವರಿಗೆ ಬಿಲ್ ಪಾವತಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂ.23ರಿಂದ ಜಿಪಂ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಸಂಘದ ಸಂಘಟನೆ ಜಿಲ್ಲಾ ಸಂಚಾಲಕ ಹನುಮಂತಪ್ಪ ಕಾಕರಗಲ್, ತಾಲೂಕು ಸಂಚಾಲಕ ಶಿವಪ್ಪ ಪಲಕನಮರಡಿ ಎಚ್ಚರಿಸಿದ್ದಾರೆ.