ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಟಿಇಟಿ: 239 ಅಭ್ಯರ್ಥಿಗಳ ಗೈರು

Rashmi Kasaragodu
Updated On : 23 Jun 2014, 11:21 am

ರಾಯಚೂರು: ನಗರ ಸೇರಿದಂತೆ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆಗೆ 239 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆಂದು ಶಿಕ್ಷಣ ಇಲಾಖೆ ತಿಳಿಸಿದೆ. ನಗರದಲ್ಲಿ 20 ಹಾಗೂ ಮಾನವಿಯ 3 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಒಟ್ಟು 4,982 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, 4,743 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 239 ಅಭ್ಯರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದು ಕಂಡುಬಂದಿತು. ಪರೀಕ್ಷೆ ವೇಳೆ ಯಾವುದೇ ರೀತಿ ಅಕ್ರಮ ನಡೆಯದಂತೆ ಮೊದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷೆ ಕೇಂದ್ರಗಳಿಗೆ ಡಿಡಿಪಿಐ ರಾಮಾಂಜನೇಯ ಮತ್ತಿತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement