ವಸತಿ ನಿಲಯ ಪ್ರವೇಶಕ್ಕೆ ಕರೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. ಲಿಂಗಸ್ಗೂರು, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ವೃತ್ತಿಪರ ಲಿಂಗಸ್ಗೂರು, ಬಾಲಕರ ವಸತಿ ನಿಲಯ ಹಟ್ಟಿ, ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡ ಬಾಲಕರ ವಸತಿ ನಿಲಯ ಲಿಂಗಸ್ಗೂರು ಇಲ್ಲಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಜು.15ರೊಳಗೆ ಅರ್ಜಿ ಸಲ್ಲಿಸಬೇಕು. ವಿವರಕ್ಕೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಅಥವಾ ಆಯಾ ವಸತಿ ನಿಲಯಗಳ ಮೇಲ್ವಿಚಾರಕರನ್ನು ಸಂಪರ್ಕಿಸಲು ಕೋರಲಾಗಿದೆ.