ಸಮಿತಿ ಸಭೆ ಜು.1ಕ್ಕೆ
ರಾಯಚೂರು: ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ಜು.1ರಂದು ಬೆ.11ಕ್ಕೆ ಜಿಪಂ ಸಭಾಂಗಣದಲ್ಲಿ ಕರೆಯಲಾಗಿದೆ. ಜಿಪಂ ಅಧ್ಯಕ್ಷರ ಅಧ್ಯಕ್ಷತೆಯ ಸಭೆಯಲ್ಲಿ ಹಿಂದುಳಿದ ಪ್ರದೇಶಗಳ ಅನುದಾನ ನಿಧಿ ಯೋಜನೆಯಡಿ ಅನುಷ್ಠಾನಗೊಳಿಸಿರುವ ಕಾಮಗಾರಿಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದು ಜಿಪಂ ಪ್ರಕಟಣೆ ತಿಳಿಸಿದೆ.