ಅಪೌಷ್ಟಿಕತೆ ಕುರಿತ ಕಾರ್ಯಾಗಾರ ನಾಳೆ
ರಾಯಚೂರು: ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟುವುದರ ಬಗೆಗಿನ ಸಮಗ್ರ ಕಾರ್ಯ ಯೋಜನೆ ಅನುಷ್ಠಾನ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಬಗ್ಗೆ ಅರಿವು ನೆರವು ಕಾರ್ಯಾಗಾರವನ್ನು ಜೂ.28ರಂದು ಆಯೋಜಿಸಲಾಗಿದೆ. ಮಧ್ಯಾಹ್ನ 12ಕ್ಕೆ ನಗರದ ಜಿಪಂ ಸಭಾಂಗಣದಲ್ಲಿ ಕಾರ್ಯಾಗಾರವನ್ನು ನ್ಯಾ. ಎನ್.ಕೆ. ಪಾಟೀಲ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಮೂರ್ತಿಗಳಾದ ಎ.ಎಸ್. ಪಚ್ಚಾಪುರೆ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಶೋಕ ಜಿ. ನಿಜಗಣ್ಣವರ್, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಜಿಪಂ ಸಿಇಒ ವಿಜಯ ಜ್ಯೋತ್ಸಾ, ಎಸ್ಪಿ ಎಂ.ಎನ್. ನಾಗರಾಜ್ ಪಾಲ್ಗೊಳ್ಳಲಿದ್ದಾರೆ.