ರಾಯಚೂರು

ಪ್ರತ್ಯೇಕ ಮತಗಟ್ಟೆ ಸ್ಥಾಪನೆಗೆ ಆಗ್ರಹ

ರಾಯಚೂರು: ದೇವದುರ್ಗ ತಾಲೂಕಿನ ಶಾಖಾಪುರ ಗ್ರಾಮವನ್ನು ಮುಷ್ಟೂರು ಮತದಾನ ಕೇಂದ್ರದಿಂದ ಪ್ರತ್ಯೇಕಿಸುವಂತೆ ದಸಂಸ ಒತ್ತಾಯಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಸಂಘದ ಪ್ರಮುಖರು, ಸದ್ಯ ಮುಷ್ಟೂರು ಗ್ರಾಮದ ಮತಗಟ್ಟೆಯಲ್ಲಿ ಶಾಖಾಪುರ ಗ್ರಾಮದ ಮತದಾರರು ಮತದಾನ ಮಾಡುತ್ತಿದ್ದು, ಮುಷ್ಟೂರು ಗ್ರಾಮವು ಐದು ಕಿಮೀ ದೂರದಲ್ಲಿರುವುದರಿಂದ ಮತದಾರರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ಶಾಖಾಪುರ ಗ್ರಾಮದಲ್ಲಿ ಸುಮಾರು 500 ರಿಂದ 600 ಮತದಾರರಿದ್ದಾರೆ. ಹೀಗಾಗಿ ಪ್ರತಿ ಬಾರಿ ನಡೆಯುವ ಚುನಾವಣೆಯಲ್ಲಿ ಕೇವಲ 100 ಜನ ಮಾತ್ರ ಮತದಾನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಖಾಪುರ ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ಸ್ಥಾಪಿಸಬೇಕು ಎಂದು ಸಂಘಟನೆಯ ರಾಮಪ್ಪ ಬಡಿಗೇರ್, ರಂಗಪ್ಪ ಕೋತಿಗುಡ್ಡ ಮತ್ತಿತರರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!