ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಸತಿ ಯೋಜನೆ ಹಣ ಬಿಡುಗಡೆಗೆ ಬಿಜೆಪಿ ಆಗ್ರಹ

Rashmi Kasaragodu
Updated On : 29 Jun 2014, 1:54 am

ಸಿಂಧನೂರು: ರಾಜೀವ್‌ಗಾಂಧಿ ವಸತಿ ಯೋಜನೆಯ ಹಣ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜೂ.30ರಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಮೋರ್ಚಾ ಅಧ್ಯಕ್ಷ ಎಂ.ದೊಡ್ಡಬಸವರಾಜ ತಿಳಿಸಿದರು. ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಸತಿ ಯೋಜನೆಗಳ ಮನೆ ಮಂಜೂರಾಗಿ ವರ್ಷಗಳೇ ಉರುಳಿದರೂ ಹಣ ಬಿಡುಗಡೆಯಾಗಿಲ್ಲ. ಇದನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಡಿಸಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು. ಜೂ.30ರಂದು ರಾಯಚೂರಿನಲ್ಲಿ ವಿವಿಧ ತಾಲೂಕು ಮಟ್ಟದ ಪದಾಧಿಕಾರಿಗಳ ಸಭೆ ಕರೆಯಲಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಹಿಂದುಳಿದ ವರ್ಗಗಳ ಸಮುದಾಯ ಮಹತ್ವದ ಪಾತ್ರ ವಹಿಸಿದ್ದು ಮುಂಬರುವ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಗಳಿಗೆ ತಯಾರಾಗುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದೆಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement