ನಾಳೆಯಿಂದ ಗುರುಭಕ್ತಿ ಉತ್ಸವ
ರಾಯಚೂರು: ಮಂತ್ರಾಲಯದಲ್ಲಿ ಮಾ.3ರಿಂದ 8ರವರೆಗೆ ರಾಘವೇಂದ್ರ ಗುರುಭಕ್ತಿ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ರಾಘವೇಂದ್ರ ಸ್ವಾಮಿಗಳ 393ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 419ನೇ ರಾಯರ ವರ್ಧಂತಿ ಉತ್ಸವದ ಹಿನ್ನೆಲೆಯಲ್ಲಿ ಗುರು ರಾಘವೇಂದ್ರ ಗುರುಭಕ್ತಿ ಉತ್ಸವ ಆಯೋಜಿಸಿದ್ದು, ಶ್ರೀಮಠದ ಪೀಠಾಧಿಪತಿಗಳಾದ ಸುಯತೀಂದ್ರತೀರ್ಥರು ಹಾಗೂ ಉತ್ತರಾಧಿಕಾರಿ ಸುಬುಧೇಂದ್ರತೀರ್ಥರ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.