ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ

Mainashree
Updated On : 4 Mar 2014, 10:46 am

ಲಿಂಗಸ್ಗೂರು ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಗೋದಾಮಿನಲ್ಲಿ ಒಣ ಕಡಲೆ ಖರೀದಿ ಕೇಂದ್ರ ಆರಂಭಕ್ಕೆ ಸಹಾಯಕ ಆಯುಕ್ತ ಟಿ.ಯೋಗೇಶ್ ಸೋಮವಾರ ಚಾಲನೆ ನೀಡಿದರು.
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕಡಲೆ ಕಾಳು ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯನ್ನು ನಾಫೇಡ್ ಪರವಾಗಿ ಖರೀದಿ ಏಜೆನ್ಸಿ ನೇಮಕ ಮಾಡಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಸಿ ಯೋಗೇಶ್ ಮನವಿ ಮಾಡಿದರು.
ಇದೇ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಮಾತನಾಡಿ, ತಾಲೂಕಿನ ರೈತರು ಒಣ ಕಡಲೆ ಬೆಂಬಲ ಬೆಲೆಗಿಂತ ಕಡಿಮೆಯಾಗಿದೆ. ಪ್ರಸ್ತುತ ಕಡಲೆ ಪ್ರತಿ ಕ್ವಿಂಟಾಲ್‌ಗೆ ರು. 3100 ರಂತೆ ಖರೀದಿಸುವುದು ಸರಿಯಲ್ಲ. ಕೇಂದ್ರ ಸರ್ಕಾರದ ದರ ರು. 3200 ಇದೆ. ಇದಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ಕೊಟ್ಟು ಖರೀದಿಸಬೇಕು. ರೈತರು ಮಾರಾಟಕ್ಕೆ ಬಂದರೆ ಖಾಲಿ ಚೀಲ ತೆಗೆದುಕೊಂಡು ಬರುವಂತೆ ಅಧಿಕಾರಿಗಳು ಹೇಳುತ್ತಾರೆ. ರೈತರು ಖಾಲಿ ಚೀಲ ತರಲು ಸಾಧ್ಯವಿಲ್ಲ. ಮಂಡಳಿಯವರೇ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ವೇಳೆ ಎಪಿಎಂಸಿ ಅಧ್ಯಕ್ಷ ಚನ್ನವೀರಪ್ಪಗೌಡ ಪಾಗದ್, ನಿರ್ದೇಶಕರಾದ ಸಂಗಣ್ಮ ದೇಸಾಯಿ, ಶರಣಬಸವ ಹೊನ್ನಳ್ಳಿ, ಎಪಿಎಂಸಿ ಕಾರ್ಯದರ್ಶಿ ಎಂ. ರಂಗಪ್ಪ, ಸಹಕಾರ ಮಂಡಳಿ ಅಧಿಕಾರಿ ಭಗವಂತರಾವ್ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement