ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸುದ್ದಿ ಸಂಕ್ಷೇಪ

Mainashree
Updated On : 5 Mar 2014, 11:03 am

ಅಭಿವೃದ್ಧಿಗೆ ಉತ್ತಮ ಶಿಕ್ಷಣ ಅಗತ್ಯ
ಸಿಂಧನೂರು: ಸಂಕೇತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಬಸವರಾಜ ಮಾತನಾಡಿ, ಹಿಂದುಳಿದ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಸಂಕೇತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಬಸವರಾಜ ತಿಳಿಸಿದರು. ನಗರದ ಆದರ್ಶ ಕಾಲೋನಿಯ ಸಂಕೇತ್ ಹಲೋ ಕಿಡ್ಸ್ ಶಾಲೆಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳು ಇಂದು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿವೆ. ಈ ಹಿಂದೆ ಉತ್ತಮ ಶಿಕ್ಷಣ ಪಡೆಯಲು ಬೆಂಗಳೂರು, ಧಾರವಾಡದಂತಹ ದೊಡ್ಡ-ದೊಡ್ಡ ನಗರಗಳಿಗೆ ಹೋಗಬೇಕಿತ್ತು. ಪ್ರಸ್ತುತ ದಿನಗಳಲ್ಲಿ ನಮ್ಮಲ್ಲಿಯೇ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂದು ಹೇಳಿದರು. ಆಡಳಿತಾಧಿಕಾರಿ ಎಸ್.ಅನಿಲ್ ರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಂದೆ-ತಾಯಿಗಳು ಸಹ ಮಕ್ಕಳಲ್ಲಿ ಬೆರೆಯಬೇಕು. ಮಕ್ಕಳ ಶಿಕ್ಷಣದ ಬಗ್ಗೆ ಪಾಲಕರು ಕಾಳಜಿ ವಹಿಸಬೇಕು. ಪ್ರಸ್ತುತ ದಿನಗಳಲ್ಲಿ ಮಕ್ಕಳು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿದ್ದು, ದೇಶಿ ಸಂಸ್ಕೃತಿಯನ್ನು ಉಳಿಸಿಕೊಂಡು, ಬೇರೆ ದೇಶಗಳ ಶಿಕ್ಷಣ, ಅಭಿವೃದ್ಧಿಯನ್ನು ನಾವು ಮೈಗೂಡಿಸಿಕೊಳ್ಳಬೇಕಿದೆ ಎಂದರು. ಡಾ. ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಕೇತ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಎಸ್.ಶೈಲಜಾ, ಸಂಕೇತ್ ಪಪೂ ಕಾಲೇಜಿನ ಪ್ರಾಚಾರ್ಯ ಶ್ರೀಧರ ಕುಲ್ಕಣರ್, ಮುಖ್ಯಗುರು ಸೂರ್ಯಪ್ರಿಯ ಹಾಗೂ ಇತರರು ವೇದಿಕೆಯಲ್ಲಿದ್ದರು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ವೈವಿಧ್ಯಮಯವಾಗಿ ಮೂಡಿಬಂದವು. ಮಕ್ಕಳು ದೇಶದ ವಿವಿಧ ಮಹನೀಯರ ವೇಷಧರಿಸಿ ಮನಸೆಳೆದರು.
ಸರ್ಕಾರಿ ವಕೀಲರ
ಹುದ್ದೆಗೆ ಅರ್ಜಿ ಕರೆ
ರಾಯಚೂರು: ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಗಳು ನ್ಯಾಯಾಲಯದಲ್ಲಿ ಹಾಲಿ ವಕೀಲಿ ವೃತ್ತಿಯಲ್ಲಿರಬೇಕು. ವಕೀಲರಾಗಿ ಕನಿಷ್ಠ 7 ವರ್ಷ ಕಾರ್ಯನಿರ್ವಹಿಸಿರಬೇಕು. ನೇಮಕಾತಿಯು ಸರ್ಕಾರದ ಮಟ್ಟದಲ್ಲಿ ನಡೆಯಲಿದೆ. ಅರ್ಹರು ಏ.3ರೊಳಗೆ ವೈಯಕ್ತಿಕ ಮಾಹಿತಿಯೊಂದಿಗೆ ಜನ್ಮ ದಿನಾಂಕ ದಾಖಲೆ, ಪದವಿ ಪ್ರಮಾಣ ಪತ್ರ, ಕಾನೂನು ಪದವಿ ಪ್ರಮಾಣ ಪತ್ರ, ಸೇವಾ ಪ್ರಮಾಣ ಪತ್ರದ ದಾಖಲೆಗಳೊಂದಿಗೆ  ಜಿಲ್ಲಾಧಿಕಾರಿ ರಾಯಚೂರು ಇವರಿಗೆ ಸಲ್ಲಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement