ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಚುನಾವಣೆ ಘೋಷಣೆ; ಬ್ಯಾನರ್ ತೆರವು

Mainashree
Updated On : 6 Mar 2014, 11:29 am

ರಾಯಚೂರು: ಲೋಕಸಭೆ ಚುನಾವಣೆಯ ದಿನಾಂಕಗಳು ಪ್ರಕಟಗೊಳ್ಳುತ್ತಿದ್ದಂತೆಯೇ ನಗರದಲ್ಲಿ ವಿವಿಧೆಡೆ ಅಳವಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ನಾಯಕರ ಹುಟ್ಟುಹಬ್ಬ ಮತ್ತಿತರೆ ಕಾರ್ಯಕ್ರಮಗಳ ಬ್ಯಾನರ್‌ಗಳನ್ನು ನಗರಸಭೆ ಸಿಬ್ಬಂದಿ ತೆರವುಗೊಳಿಸಿದರೆ ಮತ್ತೊಂದೆಡೆ ಜಿಲ್ಲಾಧಿಕಾರಿ ಕಚೇರಿ ಬಳಿ ಕರವೇ ಕಾರ್ಯಕರ್ತರು ಸರ್ಕಾರದ ಯೋಜನೆಗಳ ಭಿತ್ತಿಪತ್ರಗಳನ್ನು ಕಿತ್ತು ಹಾಕಿದರು.
ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣೆ ಆಯೋಗವು ಪ್ರಕಟಿಸುತ್ತಿದ್ದಂತೆಯೇ ನೀತಿ ಸಂಹಿತೆ ಜಾರಿಗೆ ಬಂದಿತು. ಅದರಿಂದ ಎಚ್ಚೆತ್ತ ನಗರಸಭೆಯ ಆಡಳಿತವು ನಗರದ ವಿವಿಧೆಡೆ ಅಳವಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಶುಭಕೋರುವ ಬ್ಯಾನರ್‌ಗಳ ತೆರವಿಗೆ ಮುಂದಾಯಿತು.
ನಗರಸಭೆಯ ಸಿಬ್ಬಂದಿ ಬ್ಯಾನರ್, ಬಂಟಿಂಗ್‌ಗಳನ್ನು ತೆರವುಗೊಳಿಸಿದರು. ಈ ವೇಳೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ವಾರ್ತಾ ಇಲಾಖೆಯಿಂದ ಅಳವಡಿಸಿದ್ದ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ನೀಡುವ ಬ್ಯಾನರ್‌ಗಳನ್ನು ಕರವೇ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಜೈನ್ ಮತ್ತಿತರರು ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೆರವುಗೊಳಿಸುತ್ತಿರುವುದಾಗಿ ಪ್ರಕಟಿಸಿ ಕಿತ್ತು ಹಾಕಿದರು. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಬ್ಯಾನರ್ ತೆರವಿಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಂಘಟನೆಯಿಂದಲೇ ಈ ಕಾರ್ಯ ಮಾಡುತ್ತಿರುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement