ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಹಿಳಾ ದಿನಾಚರಣೆ ಕಾರ್ಯಕ್ರಮ ಇಂದು

Rashmi Kasaragodu
Updated On : 8 Mar 2014, 10:59 am

ರಾಯಚೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಮತ್ತಿತರ ಸಂಸ್ಥೆಗಳ ಆಶ್ರಯದಲ್ಲಿ ಮಾ. 8ರಂದು ನಗರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ರಂಗಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ನಡೆವ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಪಿ.ಜಿ.ಎಂ. ಪಾಟೀಲ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಜಿಲ್ಲಾ ಎಸ್ಪಿ ಎಂ.ಎನ್. ನಾಗರಾಜ್, ಜಿಪಂ ಸಿಇಒ ವಿಜಯ ಜೋತ್ಸ್ನಾ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ಭಾನುರಾಜ್, ಡಿಡಿಪಿಐ ರಾಮಾಂಜನೇಯ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಲೋಹಿಯಾ ಪ್ರತಿಷ್ಠಾನ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಆಶ್ರಯದಲ್ಲಿ ಬೆಳಗ್ಗೆ 10ಕ್ಕೆ ನಡೆಯುವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲಂಕೇಶ್ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಪಾಲ್ಗೊಳ್ಳಲಿದ್ದಾರೆ. ಡಾ. ಪುಷ್ಪಾಂಜಲಿ ಮಾಲಿಪಾಟೀಲ್ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಲೋಹಿಯಾ ಪ್ರತಿಷ್ಠಾನದ ಅಧ್ಯಕ್ಷ ಭೀಮನಗೌಡ ಇಟಗಿ ವಹಿಸುವರು. ಕಾಲೇಜಿನ ಪ್ರಾಚಾರ್ಯ ಪ್ರೊ. ಮಹಿಪಾಲರೆಡ್ಡಿ ಪಾಟೀಲ್, ಪ್ರತಿಷ್ಠಾನದ ಕಾರ್ಯದರ್ಶಿ ಡಾ. ದಸ್ತಗೀರ್‌ಸಾಬ ದಿನ್ನಿ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement