'ಪರಿಹಾರ ನೀಡಿ'
ರಾಯಚೂರು: ರಾಜ್ಯದ ವಿವಿಧೆಡೆ ಅಕಾಲಿಕ ಆಲಿಕಲ್ಲು ಮಳೆಯಾಗುವ ಮೂಲಕ ರೈತರ ಬೆಳೆಹಾನಿಗೆ ಕಾರಣವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ರೈತ ಕೃಷಿಕಾರ್ಮಿಕರ ಸಂಘಟನೆಯು ರಾಜ್ಯ ಸರ್ಕಾರವನ್ನು ಬೆಳೆ ಹಾನಿ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ ಪರಿಹಾರ ವಿತರಿಸಲು ಒತ್ತಾಯಿಸಿದೆ.
ಈ ಕುರಿತು ಸಂಘಟನೆಯ ಜಿಲ್ಲಾ ಸಂಚಾಲಕ ಎಂ. ರಾಮಣ್ಣ ಪ್ರಕಟಣೆ ನೀಡಿ, ರಾಜ್ಯದ ವಿವಿಧೆಡೆ ಸುರಿದ ಆಲಿಕಲ್ಲು ಮಳೆಗೆ ರೈತರು ಬೆಳೆದಿದ್ದ ಜೋಳ, ಹತ್ತಿ, ಮೆಣಸಿನಕಾಯಿ ಮತ್ತಿತರೆ ಕೋಟ್ಯಂತರ ರು. ಬೆಳೆ ಹಾನಿಗೀಡಾಗಿದೆ. ಅದೇ ರೀತಿ ಗ್ರಾಮೀಣ ಪ್ರದೇಶದಲ್ಲಿ ಬಡವರ ಆಸ್ತಿಗೆ ನಷ್ಟವಾಗಿದೆ ಎಂದು ದೂರಿದ್ದಾರೆ. ಈಗಾಗಲೇ ರೈತರು ವಿವಿಧ ಕಾರಣಗಳಿಗೆ ಆರ್ಥಿಕ ಸಂಕಷ್ಟದಲ್ಲಿದ್ದು, ಸದ್ಯ ಅಕಾಲಿಕ ಮಳೆಯಿಂದ ಮತ್ತಷ್ಟು ಆರ್ಥಿಕ ಹೊರೆ ಹೆಚ್ಚಳವಾಗಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಹಾನಿ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.