ನಾಳೆ ಮಕ್ಕಳ ಹಬ್ಬ
ರಾಯಚೂರು: ನಗರದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ ಸೇರಿ ವಿವಿಧ ಸರ್ಕಾರಿ ಸಂಸ್ಥೆಗಳ ಆಶ್ರಯದಲ್ಲಿ ಮಾ.13ರಂದು ಮಕ್ಕಳ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ರಂಗಮಂದಿರದಲ್ಲಿ ಅಂದು ಬೆಳಗ್ಗೆ 9.30ಕ್ಕೆ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಪಿ.ಜಿ.ಎಂ. ಪಾಟೀಲ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅಧ್ಯಕ್ಷತೆ ವಹಿಸುವರು. ಮುಖ್ಯ ಹಿರಿಯ ವ್ಯವಹಾರ ನ್ಯಾಯಾಧೀಶ ಪಿ.ಜಿ. ಚಲುವಮೂರ್ತಿ, ಜಿಪಂ ಸಿಇಒ ವಿಜಯ ಜ್ಯೋತ್ಸ್ನಾ, ಎಸ್ಪಿ ಎಂ.ಎನ್. ನಾಗರಾಜ್, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡದ ಯೋಜನಾಧಿಕಾರಿ ಮಾಲತಿ ಪೋಳ, ವೀಣಾ ಪಲ್ಲಕ್ಕಿ ಪಾಲ್ಗೊಳ್ಳಲಿದ್ದಾರೆ.
ತಂಬಾಕು ವಿರೋಧಿ ದಿನ
ರಾಯಚೂರು: ನಗರದ ಭಾರತೀಯ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ಮಾ.12ರಂದು ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10ಕ್ಕೆ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ತಿಳಿಸಿದೆ.
ಬಿಜೆಪಿಗೆ ನೇಮಕ
ದೇವದುರ್ಗ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾಗಿ ಇಲ್ಲಿನ ಪುರಸಭೆ ಸದಸ್ಯ ಶ್ರೀನಿವಾಸ ಅಬಕಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಎಂ. ದೊಡ್ಡಬಸವರಾಜ ಆದೇಶ ಹೊರಡಿಸಿ, ಮಾಜಿ ಸಚಿವ ಕೆ. ಶಿವನಗೌಡ ನಾಯಕ ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷ ಜಂಬಣ್ಣ ನೀಲೋಗಲ್ ಅವರ ಶಿಫಾರಸ್ಸಿನ ಮೇರೆಗೆ ಶ್ರೀನಿವಾಸ ಅಬಕಾರಿ ಅವರನ್ನು ನೇಮಿಸಿದೆ.