ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ
ದೇವದುರ್ಗ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅವರು ಬುಧವಾರ ತಾಲೂಕು ಆಡಳಿತದ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ, ತಾಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ರಸ್ತೆ, ಸಮರ್ಪಕ ವಿದ್ಯುತ್ ವ್ಯವಸ್ಥೆ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆ, ಪಟ್ಟಣದ ಜೈರುದ್ದೀನ್ ಪಾಶಾ ವೃತ್ತದಿಂದ ಪೊಲೀಸ್ ಠಾಣೆವರೆಗೆ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪಟ್ಟಣದಲ್ಲಿ ಸಾಂಸ್ಕೃತಿಕ ಚಟುವಟಿಕೆ ಮಾಡಲು ಕನ್ನಡ ಭವನ ನಿರ್ಮಾಣ ಮಾಡಬೇಕೆಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ವೀರೇಶ ಹೀರಾ, ಪ್ರಮುಖರಾದ ಶರಣು ಬಿ. ಗದ್ದುಗೆ, ಬಿ. ನಾಗೇಶ, ಮಹೇಂದ್ರಕರ್, ಶಿವಶಂಕರ ಹಿರೇಮಠ, ರಾಘವೇಂದ್ರ ಯಾದಗಿರಿ, ನಾಗರಾಜ ಕಲ್ಲೂರು, ವೆಂಕಟೇಶ ನಾಯಕ ಸೇರಿ ಅನೇಕರಿದ್ದರು.