ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಪಿಯು ಪರೀಕ್ಷೆ: 607 ವಿದ್ಯಾರ್ಥಿಗಳ ಗೈರು

Rashmi Kasaragodu
Updated On : 13 Mar 2014, 12:02 pm

ರಾಯಚೂರು: ಜಿಲ್ಲೆಯಲ್ಲಿ ಬುಧವಾರದಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷೆಗಳ ಮೊದಲ ದಿನ ಸಂಖ್ಯಾಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳ ಪರೀಕ್ಷೆಗೆ 607 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಪರೀಕ್ಷೆಗೆ ಒಟ್ಟು 7311 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಜಿಲ್ಲೆಯಲ್ಲಿ ಮೊದಲ ದಿನದ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಕಚೇರಿ ಮೂಲಗಳು ತಿಳಿಸಿವೆ. ರಾಜ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ವಿಷಯದ ಪರೀಕ್ಷೆಗೆ ಒಟ್ಟು 7918 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 7311 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು.
ರಾಯಚೂರು ತಾಲೂಕಿನ 10, ಮಾನವಿಯ 3, ಸಿಂಧನೂರಿನ 6, ದೇವದುರ್ಗದ 2 ಮತ್ತು ಲಿಂಗಸ್ಗೂರಿನ 6 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಗೆ ಒಟ್ಟು 15655 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆಂದು ಡಿಡಿಪಿಯು ಕಚೇರಿ ತಿಳಿಸಿದೆ.
ನಗರದ ಸೇಂಟ್ ಮೇರೀಸ್ ಕಾಲೇಜು ಮತ್ತು ವಿದ್ಯಾಭಾರತಿ ಕಾಲೇಜುಗಳಲ್ಲಿ ಕೆಲ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಹಾಜರಾಗಲು ಶಾಲಾ ಆಡಳಿತ ಅವಕಾಶ ನಿರಾಕರಿಸಿದ ಬಗ್ಗೆ ಆರೋಪಗಳು ಕೇಳಿಬಂದವು. ಆದರೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎಂದು ಕಾಲೇಜು ಆಡಳಿತ ಸ್ಪಷ್ಟಪಡಿಸಿದೆ.
6 ಕೇಂದ್ರಗಳಲ್ಲಿ ಪರೀಕ್ಷೆ
ದೇವದುರ್ಗ ವರದಿ: ತಾಲೂಕಿನಲ್ಲಿ ಬುಧವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು, ವಿವಿಧೆಡೆಯ 6 ಪರೀಕ್ಷೆ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಪಟ್ಟಣದ ಎರಡು ಪರೀಕ್ಷೆ ಕೇಂದ್ರಗಳಲ್ಲಿ ರಾಜ್ಯಶಾಸ್ತ್ರದ ಪರೀಕ್ಷೆ ನಡೆದು ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ಒಟ್ಟು 518 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 479 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾದರು. ಅದೇ ರೀತಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಒಟ್ಟು 319 ವಿದ್ಯಾರ್ಥಿಗಳ ಪೈಕಿ 290 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement