ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಪೋತಾಳ: ವಿದ್ಯಾಭಾರತಿ ಶಾಲಾ ವಾರ್ಷಿಕೋತ್ಸವ

Rashmi Kasaragodu
Updated On : 13 Mar 2014, 12:03 pm

ರಾಯಚೂರು: ಮಾನವಿ ತಾಲೂಕಿನ ಪೋತ್ನಾಳ ಗ್ರಾಮದ ವಿದ್ಯಾಭಾರತಿ ಶಾಲೆಯ ಮೂರನೇ ಶಾಲಾ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ಆಯೋಜಿಸಲಾಗಿತ್ತು.
ಸಮಾರಂಭಕ್ಕೆ ಶಾಸಕ ಹಂಪಯ್ಯ ನಾಯಕ ಚಾಲನೆ ನೀಡಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಿ ದೇಶದ ಪ್ರಗತಿಗೆ ಮುಂದಾಗಬೇಕೆಂದು ಕರೆ ನೀಡಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿವೆ ಎಂದರು.
ಪೋತ್ನಾಳ ಜಿಪಂ ಸದಸ್ಯ ವಿಶ್ವನಾಥ ಪಾಟೀಲ್ ತೋರದಿನ್ನಿ ಮಾತನಾಡಿದರು. ಅಧ್ಯಕ್ಷತೆಯನ್ನು ಬಸವರಾಜ ನಾಡಗೌಡ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ರಾಜು ತಾಳಿಕೋಟೆ ಮಾತನಾಡಿದರು. ಬಸವರಾಜಪ್ಪ, ಡಾ. ಈ.ವಿ. ಶರ್ಮ, ಡಾ. ನಾರಾಯಣ, ಮಲ್ಲಿಕಾರ್ಜುನ, ಅಮರೇಗೌಡ, ಈರಪ್ಪ, ಚನ್ನಬಸವ, ಶಿವನಪ್ಪ ಸಾಹುಕಾರ, ಬಸವರಾಜ, ಚಿದಾನಂದ, ಶಿಕ್ಷಣ ಸಂಯೋಜಕ ವಲಿಬಾಬು ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement