ಇಂದು ಪರಮೇಶ್ವರ್ ಭೇಟಿ
ರಾಯಚೂರು: ಮಾ.14ರಂದು ಕಾಂಗ್ರೆಸ್ ಆಯೋಜಿಸಿರುವ ಭಾರತ್ ನಿರ್ಮಾಣ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮಾ. 14ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ನಗರಕ್ಕೆ ಆಗಮಿಸಿ, ಬೆಳಗ್ಗೆ 11ಕ್ಕೆ ದೇವದುರ್ಗ ವಿಧಾಸಭೆ ಕ್ಷೇತ್ರ, ಮಧ್ಯಾಹ್ನ 3ಕ್ಕೆ ಲಿಂಗಸ್ಗೂರು ವಿಧಾನಸಭೆ ಕ್ಷೇತ್ರ ಹಾಗೂ ಸಂಜೆ 6ಕ್ಕೆ ಮಾನವಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರತ್ ನಿರ್ಮಾಣ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.