ಚುನಾವಣೆ; ಇಂದು ಸಭೆ
ರಾಯಚೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿ ವಿವಿಧ ಇಲಾಖೆ ಮತ್ತು ವಿಭಾಗಗಳ ಅಧಿಕಾರಿಗಳ ಸಭೆಯನ್ನು ಮಾ.14ರಂದು ಕರೆಯಲಾಗಿದೆ. ಅಂದು ಮಧ್ಯಾಹ್ನ 3ಕ್ಕೆ ನಗರದ ರಂಗಮಂದಿರದಲ್ಲಿ ಈ ಸಭೆ ನಡೆಯಲಿದ್ದು, ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಡೆಪ್ಯೂಟಿ ಸೂಪರಿಂಡೆಂಟ್ ಆಫ್ ಪೊಲೀಸ್ ಅಧಿಕಾರಿಗಳು, ತಾಲೂಕು ಎಂಸಿಸಿ ತಂಡ, ಸೆಕ್ಟೋರಲ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವೀವಿಂಗ್ ತಂಡಗಳು ಪಾಲ್ಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.