ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸರ್ಕಾರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Rashmi Kasaragodu
Updated On : 15 Mar 2014, 11:47 am

ಗುಲ್ಬರ್ಗ: ನಗರದ ಜೇವರ್ಗಿ ಕಾಲೋನಿ ಬಡಾವಣೆಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಜಿಪಂ ಸದಸ್ಯೆ ಶೋಭಾ ಬಾಣಿ ಮಹಿಳಾ ಹಕ್ಕುಗಳ ಬಗ್ಗೆ ಮಾತನಾಡಿದರು.
ಹಿರಿಯರಾದ ಡಾ. ಶೈಲಜಾ ಕೊಪ್ಪರ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಭಾರಿ ಪ್ರಾಂಶುಪಾಲ ವಿಜಯಕುಮಾರ ಕುಲಕರ್ಣಿ ವಹಿಸಿದ್ದರು. ಕಾಲೇಜಿನಲ್ಲಿ ಸಾಂಸ್ಕೃತಿಕ ಘಟಕದ ಕಾರ್ಯದರ್ಶಿ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ಪದ್ಮಣ್ಣ ರಾಸಣಗಿಯವರು ಕಾರ್ಯಕ್ರಮ ನಡೆಸಿಕೊಟ್ಟರು. ಡಾ. ಸಾರಿಕಾ ದೇವಿ ಕಾಳಗಿವಂದಿಸಿದರು. ಇದೇ ಸಂದರ್ಭದಲ್ಲಿ ಬಿಎ 5ನೇ ಸೆಮಿಸ್ಟರ್‌ನ ರಾಜ್ಯಶಾಸ್ತ್ರ ವಿಷಯದಲ್ಲಿ ಶೇ.94 ರಷ್ಟು ಅಂಕಪಡೆದ ಸುಮನ್‌ಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement